ಅಸ್ಸಾಂ ಬಾಲ್ಯ ವಿವಾಹ ಕಾರ್ಯಾಚರಣೆ 
ದೇಶ

ಅಸ್ಸಾಂ: ತೀವ್ರ ವಿರೋಧದ ನಡುವೆ ಬಾಲ್ಯ ವಿವಾಹದ ವಿರುದ್ಧ ಕಾರ್ಯಾಚರಣೆ;: 2,441 ಮಂದಿ ಬಂಧನ

ಪ್ರತಿಪಕ್ಷಗಳ ಟೀಕೆ ಮತ್ತು ತೀವ್ರ ಪ್ರತಿಭಟನೆಗಳ ನಡುವೆಯೇ ಅಸ್ಸಾಂ ಪೊಲೀಸರು ಬಾಲ್ಯ ವಿವಾಹದ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದು, ಮೂರು ದಿನಗಳ ಅವಧಿಯಲ್ಲಿ ಒಟ್ಟು 2,441 ಮಂದಿಯನ್ನು ಬಂಧಿಸಿದ್ದಾರೆ.

ಗುವಾಹತಿ: ಪ್ರತಿಪಕ್ಷಗಳ ಟೀಕೆ ಮತ್ತು ತೀವ್ರ ಪ್ರತಿಭಟನೆಗಳ ನಡುವೆಯೇ ಅಸ್ಸಾಂ ಪೊಲೀಸರು ಬಾಲ್ಯ ವಿವಾಹದ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದು, ಮೂರು ದಿನಗಳ ಅವಧಿಯಲ್ಲಿ ಒಟ್ಟು 2,441 ಮಂದಿಯನ್ನು ಬಂಧಿಸಿದ್ದಾರೆ.

ಬಾಲ್ಯವಿವಾಹ ಸಾಮಾಜಿಕ ಪಿಡುಗನ್ನು ಕೊನೆಗೊಳಿಸುವ ಕಾರ್ಯಾಚರಣೆಯು ಮುಂದಿನ ವಿಧಾನಸಭಾ ಚುನಾವಣೆಯವರೆಗೂ ಚಾಲ್ತಿಯಲ್ಲಿರಲಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ ಸ್ಪಷ್ಟಪಡಿಸಿದ್ದರು. ಆದರೆ, ಇದು ತರಾತುರಿಯಲ್ಲಿ ನಡೆಸಿದ ಪ್ರಚಾರದ ಕಸರತ್ತು ಎಂದು ಪ್ರತಿಪಕ್ಷಗಳು ಟೀಕಿಸಿವೆ. 

ಬಾಲ್ಯ ವಿವಾಹ ತಡೆ ಕಾಯ್ದೆ ಅಡಿಯಲ್ಲಿ ರಾಜ್ಯಾದ್ಯಂತ 4,074 ಎಫ್‌ಐಆರ್‌ಗಳು ದಾಖಲಾಗಿದ್ದು, ಅದರ ಆಧಾರದಲ್ಲಿ ಬಂಧನ ಪ್ರಕ್ರಿಯೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಸ್ವನಾಥ್ ಜಿಲ್ಲೆಯಲ್ಲಿ ಕನಿಷ್ಠ 139 ಜನರನ್ನು ಬಂಧಿಸಲಾಗಿದೆ, ಬರ್ಪೇಟಾದಲ್ಲಿ 130 ಮತ್ತು ಧುಬ್ರಿಯಲ್ಲಿ 126, ಬಕ್ಸಾದಲ್ಲಿ 123, ಬೊಂಗೈಗಾಂವ್ ಮತ್ತು ಹೊಜೈನಲ್ಲಿ ತಲಾ 117 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರ ಹೇಳಿಕೆ ತಿಳಿಸಿದೆ.

ಬಾಲ್ಯ ವಿವಾಹಗಳ ವಿರುದ್ಧ ಧುಬ್ರಿಯಲ್ಲಿ ಅತಿ ಹೆಚ್ಚು (374) ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಹೊಜೈ (255) ಮತ್ತು ಮೊರಿಗಾಂವ್ (224) ನಂತರದ ಸ್ಥಾನದಲ್ಲಿವೆ.

ಕಾರ್ಯಾಚರಣೆ ವಿರುದ್ಧ ಬರಾಕ್ ಕಣಿವೆಯ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್