ದೇಶ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನ್ಯಾ. ಪಂಕಜ್ ಮಿಥಲ್, ಸಂಜಯ್ ಕರೋಲ್ ಸೇರಿ ಐವರು ಪ್ರಮಾಣವಚನ

Srinivasamurthy VN

ನವದೆಹಲಿ: ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ನ್ಯಾ. ಪಂಕಜ್ ಮಿಥಲ್, ಸಂಜಯ್ ಕರೋಲ್ ಸೇರಿ ಐವರು ಸೋಮವಾರ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಐವರು ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್, ಸಂಜಯ್ ಕರೋಲ್, ಪಿ ವಿ ಸಂಜಯ್ ಕುಮಾರ್, ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಮನೋಜ್ ಮಿಶ್ರಾ ಅವರು ಪ್ರಮಾಣ ವಚನ ಸ್ವೀಕರಿಸಿದರು. ಮೂವರು  ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಹೈಕೋರ್ಟ್‌ನ ಇಬ್ಬರು ಹಿರಿಯ ನ್ಯಾಯಮೂರ್ತಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. 

ಸುಪ್ರೀಂ ಕೋರ್ಟ್‌ನ ನೂತನ ಕಟ್ಟಡದ ಸಭಾಂಗಣದಲ್ಲಿ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಅವರು ಪ್ರಮಾಣ ವಚನ ಬೋಧಿಸಿದರು. ಐವರಿಂದ ಪ್ರಮಾಣವಚನ ಸ್ವೀಕರಿಸುವುದರೊಂದಿಗೆ ನ್ಯಾಯಮೂರ್ತಿಗಳ ಒಟ್ಟು ಸಂಖ್ಯೆ 32ಕ್ಕೆ ಏರಲಿದೆ. ಸುಪ್ರೀಂ ಕೋರ್ಟ್‌ನ ಮಂಜೂರಾಗಿರುವ ನ್ಯಾಯಮೂರ್ತಿಗಳ ಸ್ಥಾನ 34 ಆಗಿವೆ. ಇನ್ನು ಎರಡು ಹುದ್ದೆಗಳು ಬಾಕಿ ಇವೆ.

ಕೊಲಿಜಿಯಂ ಶಿಫಾರಸು: 
ಈ ಐವರು ನ್ಯಾಯಮೂರ್ತಿಗಳ ಹೆಸರನ್ನು ಸುಪ್ರೀಂ ಕೋರ್ಟ್‌ನ ಆರು ಸದಸ್ಯರ ಕೊಲಿಜಿಯಂ ಕಳೆದ ವರ್ಷ ಡಿಸೆಂಬರ್‌ 13ರಂದು ಶಿಫಾರಸು ಮಾಡಿತ್ತು.
 

SCROLL FOR NEXT