ಪ್ರಾತಿನಿಧಿಕ ಚಿತ್ರ 
ದೇಶ

ಬಿಹಾರದಲ್ಲಿ ಎರಡು ಕಿ.ಮೀ ರೈಲು ಹಳಿ ಕಳ್ಳತನ, ರೈಲ್ವೆ ರಕ್ಷಣಾ ಪಡೆಯ ಇಬ್ಬರು ನೌಕರರ ಅಮಾನತು

ಬಿಹಾರದ ಸಮಸ್ತಿಪುರ್ ಜಿಲ್ಲೆಯಲ್ಲಿ ಅಪರಿಚಿತ ಕಳ್ಳರು ಎರಡು ಕಿಮೀ ಉದ್ದದ ರೈಲ್ವೆ ಹಳಿಯನ್ನು ಕದ್ದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಟ್ನಾ: ಬಿಹಾರದ ಸಮಸ್ತಿಪುರ್ ಜಿಲ್ಲೆಯಲ್ಲಿ ಅಪರಿಚಿತ ಕಳ್ಳರು ಎರಡು ಕಿಮೀ ಉದ್ದದ ರೈಲ್ವೆ ಹಳಿಯನ್ನು ಕದ್ದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕದ್ದ ಟ್ರ್ಯಾಕ್ ಲೋಹತ್ ಸಕ್ಕರೆ ಕಾರ್ಖಾನೆಯನ್ನು ಪಂಡೌಲ್ ರೈಲು ನಿಲ್ದಾಣದೊಂದಿಗೆ ಸಂಪರ್ಕಿಸುತ್ತಿತ್ತು. ಕಳೆದ ಕೆಲವು ವರ್ಷಗಳಿಂದ ಸಕ್ಕರೆ ಕಾರ್ಖಾನೆ ಸ್ಥಗಿತಗೊಂಡಿದ್ದರಿಂದ ಈ ಮಾರ್ಗದಲ್ಲಿ ಸಂಚಾರವೇ ಇರಲಿಲ್ಲ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ರೈಲ್ವೆ ರಕ್ಷಣಾ ಪಡೆಯ ನೌಕರರನ್ನು ಅಮಾನತುಗೊಳಿಸಲಾಗಿದೆ.

ಈ ಬಗ್ಗೆ ತನಿಖೆ ನಡೆಸಲು ಸಮಸ್ತಿಪುರ ಡಿಆರ್‌ಎಂ ತಂಡವನ್ನು ರಚಿಸಿದ್ದಾರೆ. ಆರ್‌ಪಿಎಫ್ ಸಿಬ್ಬಂದಿಯೊಂದಿಗೆ ಸೇರಿಕೊಂಡೇ ಕಳ್ಳತನ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆ ರಸ್ತೆಯಲ್ಲಿ ಯಾವುದೇ ಚಲನವಲನ ಇಲ್ಲದ ಕಾರಣ, ಕಳ್ಳರು ಟ್ರ್ಯಾಕ್ ಅನ್ನು ಕದ್ದು ಸ್ಕ್ರ್ಯಾಪ್ ಡೀಲರ್‌ಗಳಿಗೆ ಮಾರಾಟ ಮಾಡಿದ್ದಾರೆ. ಬಿಹಾರದಲ್ಲಿ ರೈಲ್ವೇ ಸ್ಕಾರ್ಪ್‌ಗಳ ಕಳ್ಳತನವು ನಿತ್ಯದ ಸಂಗತಿಯಾಗಿದೆ. ಆದರೆ, ಬಹುಶಃ 2 ಕಿಮೀ ಹಳಿಯನ್ನು ಕಳವು ಮಾಡಿರುವುದು ಇದೇ ಮೊದಲು.

ಈ ಸಂಬಂಧ ಆರ್‌ಪಿಎಫ್‌ನಿಂದ ಎಫ್ಐಆರ್ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

SCROLL FOR NEXT