ಸಾಂದರ್ಭಿಕ ಚಿತ್ರ 
ದೇಶ

ಭಾರತದ ಮುಂದಿನ ಜನಗಣತಿ ಪ್ರಕ್ರಿಯೆ ಡಿಜಿಟಲೀಕರಣ; ಆ್ಯಪ್ ಆಧಾರಿತ ಗಣತಿ: ಕೇಂದ್ರ

ಭಾರತ ಮೊದಲ ಬಾರಿಗೆ ಜನಗಣತಿಯನ್ನು ಡಿಜಿಟಲೀಕರಣ ಮಾಡುವುದಕ್ಕೆ ಸಜ್ಜಾಗುತ್ತಿದ್ದು, 130 ಕೋಟಿಗೂ ಹೆಚ್ಚು ಭಾರತೀಯರ ನಿಖರವಾದ ಗಣತಿ, ವರ್ಗ, ಲಿಂಗ, ವಯಸ್ಸು, ಉದ್ಯೋಗ ಮತ್ತು ಇತರ ಸಾಮಾಜಿಕ-ಆರ್ಥಿಕ ದತ್ತಾಂಶಗಳನ್ನು...

ನವದೆಹಲಿ: ಭಾರತ ಮೊದಲ ಬಾರಿಗೆ ಜನಗಣತಿಯನ್ನು ಡಿಜಿಟಲೀಕರಣ ಮಾಡುವುದಕ್ಕೆ ಸಜ್ಜಾಗುತ್ತಿದ್ದು, 130 ಕೋಟಿಗೂ ಹೆಚ್ಚು ಭಾರತೀಯರ ನಿಖರವಾದ ಗಣತಿ, ವರ್ಗ, ಲಿಂಗ, ವಯಸ್ಸು, ಉದ್ಯೋಗ ಮತ್ತು ಇತರ ಸಾಮಾಜಿಕ-ಆರ್ಥಿಕ ದತ್ತಾಂಶಗಳನ್ನು ಸಂಗ್ರಹಿಸಲು ತಂತ್ರಜ್ಞಾನ ಅಭಿವೃದ್ಧಿಪಡಿಸಲಾಗುತ್ತಿದೆ.

ಮುಂದಿನ ಜನಗಣತಿಯು ಆ್ಯಪ್ ಆಧಾರಿತ ಗಣತಿಯಾಗಲಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯನಾದ್ ರೈ ಅವರು ಮಂಗಳವಾರ ಸಂಸತ್ತಿಗೆ ಮಾಹಿತಿ ನೀಡಿದ್ದು, "ಮುಂಬರುವ ಜನಗಣತಿಯು ಮೊದಲ ಡಿಜಿಟಲ್ ಗಣತಿಯಾಗಲಿದೆ ಮತ್ತು ಸ್ವಯಂ-ಎಣಿಕೆಗೆ ಅವಕಾಶವಿದೆ" ಎಂದಿದ್ದಾರೆ.

"ದತ್ತಾಂಶ ಸಂಗ್ರಹಣೆಗಾಗಿ ಮೊಬೈಲ್ ಅಪ್ಲಿಕೇಶನ್‌ಗಳು ಮತ್ತು ವಿವಿಧ ಜನಗಣತಿ ಸಂಬಂಧಿತ ಚಟುವಟಿಕೆಗಳ ನಿರ್ವಹಣೆ ಮತ್ತು ಮೇಲ್ವಿಚಾರಣೆಗಾಗಿ ಜನಗಣತಿ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಲಾಗಿದೆ" ಎಂದು ರೈ ತಿಳಿಸಿದ್ದಾರೆ.

2021ರಲ್ಲಿ ನಡೆಸಲು ಉದ್ದೇಶಿಸಲಾದ ದಶವಾರ್ಷಿಕ ಜನಗಣತಿಯ ಸ್ಥಿತಿಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 2021ರಲ್ಲಿ ಜನಗಣತಿ ನಡೆಸುವ ಸರ್ಕಾರದ ಉದ್ದೇಶವನ್ನು ಮಾರ್ಚ್ 28, 2019 ರಂದು ಗೆಜೆಟ್‌ನಲ್ಲಿ ತಿಳಿಸಲಾಗಿದೆ. ಆದರೆ ಕೋವಿಡ್ ಸಾಂಕ್ರಾಮಿಕದಿಂದ ಜನಗಣತಿ 2021 ಮತ್ತು ಸಂಬಂಧಿತ ಕ್ಷೇತ್ರ ಚಟುವಟಿಕೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ. ಮುಂದಿನ ಜನಗಣತಿಯನ್ನು ಡಿಜಿಟಲ್ ವೇದಿಕೆಯಲ್ಲಿ ಮಾಡಲಾಗುವುದು" ಎಂದು ರೈ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ