ಕೋರ್ಟ್ ಗೆ ನುಗ್ಗಿದ ಚಿರತೆ 
ದೇಶ

ಗಾಜಿಯಾಬಾದ್ ಕೋರ್ಟ್ ಗೆ ನುಗ್ಗಿದ ಚಿರತೆ, ಕನಿಷ್ಠ ಐವರಿಗೆ ಗಾಯ

ನವದೆಹಲಿಯ ಹೊರವಲಯದಲ್ಲಿರುವ ಗಾಜಿಯಾಬಾದ್ ನ್ಯಾಯಾಲಯದ ಆವರಣಕ್ಕೆ ನುಗ್ಗಿದ ಚಿರತೆ, ಐವರ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ ಕನಿಷ್ಠ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಜಿಯಾಬಾದ್: ನವದೆಹಲಿಯ ಹೊರವಲಯದಲ್ಲಿರುವ ಗಾಜಿಯಾಬಾದ್ ನ್ಯಾಯಾಲಯದ ಆವರಣಕ್ಕೆ ನುಗ್ಗಿದ ಚಿರತೆ, ಐವರ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ ಕನಿಷ್ಠ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಮಧ್ಯಾಹ್ನ ಗಾಜಿಯಾಬಾದ್ ಕೋರ್ಟ್‌ನ ಹಳೆಯ ಕಟ್ಟಡದ ಬಳಿಯಿದ್ದ ವಕೀಲ, ಶೂ ಪಾಲೀಶ್‌ ಮಾಡುತ್ತಿದ್ದ ವ್ಯಕ್ತಿ ಹಾಗೂ ಪೊಲೀಸರ ಮೇಲೆ ಚಿರತೆ ದಾಳಿ ಮಾಡಿದೆ. ಶೂ ಪಾಲಿಶ್‌ ಮಾಡುತ್ತಿದ್ದ ವ್ಯಕ್ತಿಯ ಕಿವಿಯನ್ನು ಚಿರತೆ ಹರಿದು ಹಾಕಿದೆ. ಆತ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಸುಮಾರು ಅರ್ಧ ಗಂಟೆಯ ನಂತರ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಮತ್ತು ಪೊಲೀಸರು ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

"ಚಿರತೆ ಭಯಭೀತವಾಗಿ ನ್ಯಾಯಾಲಯದ ಸಂಕೀರ್ಣದಲ್ಲಿ ಜಿಗಿದಿದೆ. ಜನರ ಓಡಾಟವನ್ನು ನೋಡಿ ಇನ್ನಷ್ಟು ಆಕ್ರಮಣಕ್ಕೆ ಇಳಿಯಿತು. ಘಟನೆಯಲ್ಲಿ ಐದರಿಂದ ಆರು ಜನ ಗಾಯಗೊಂಡಿದ್ದಾರೆ" ಎಂದು ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್