ಆಟೋಗೆ ಟ್ರಕ್ ಡಿಕ್ಕಿ 
ದೇಶ

ಛತ್ತೀಸ್‌ಗಢ: ಆಟೋಗೆ ಟ್ರಕ್ ಡಿಕ್ಕಿ, ಏಳು ಶಾಲಾ ಮಕ್ಕಳು ಸಾವು

ರಾಯ್‌ಪುರದಿಂದ ದಕ್ಷಿಣಕ್ಕೆ 200 ಕಿ.ಮೀ ದೂರದಲ್ಲಿರುವ ಕಂಕೇರ್ ಜಿಲ್ಲೆಯ ಭಾನುಪ್ರತಾಪುರದಲ್ಲಿ ಗುರುವಾರ ಮಧ್ಯಾಹ್ನ ಆಟೋಗೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಏಳು ಶಾಲಾ ಮಕ್ಕಳು ಸಾವನ್ನಪ್ಪಿದ್ದಾರೆ.

ರಾಯ್‌ಪುರ: ರಾಯ್‌ಪುರದಿಂದ ದಕ್ಷಿಣಕ್ಕೆ 200 ಕಿ.ಮೀ ದೂರದಲ್ಲಿರುವ ಕಂಕೇರ್ ಜಿಲ್ಲೆಯ ಭಾನುಪ್ರತಾಪುರದಲ್ಲಿ ಗುರುವಾರ ಮಧ್ಯಾಹ್ನ ಆಟೋಗೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಏಳು ಶಾಲಾ ಮಕ್ಕಳು ಸಾವನ್ನಪ್ಪಿದ್ದಾರೆ. ಓರ್ವ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ.

ಕೋರೇರ್-ಭಾನುಪ್ರತಾಪುರ ಮಾರ್ಗದಲ್ಲಿ ಶಾಲಾ ಮಕ್ಕಳು ಆಟೋ ರಿಕ್ಷಾದಲ್ಲಿ ಮನೆಗೆ ಮರಳುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ.

“ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಆಟೋ-ರಿಕ್ಷಾ ಬಹುಶಃ ತಪ್ಪು ದಿಕ್ಕಿನಲ್ಲಿ ಹಠಾತ್ ತಿರುವು ತೆಗೆದುಕೊಂಡಿದೆ. ಈ ವೇಳೆ  ಎದುರಿನಿಂದ ಬಂದ ಟ್ರಕ್ ಅದಕ್ಕೆ ಡಿಕ್ಕಿ ಹೊಡೆದಿದೆ. ಆಟೋದಲ್ಲಿ ಒಟ್ಟು ಎಂಟು ಮಕ್ಕಳಿದ್ದರು. ಉಳಿದ ಗಾಯಗೊಂಡ ಮಗುವನ್ನು ತಕ್ಷಣದ ವೈದ್ಯಕೀಯ ಚಿಕಿತ್ಸೆಗಾಗಿ ರಾಯ್‌ಪುರಕ್ಕೆ ಕಳುಹಿಸಲಾಗುವುದು" ಎಂದು ಕಂಕೇರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಲಭ್ ಸಿನ್ಹಾ ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಅಪಘಾತದ ನಂತರ ಲಾರಿ ಚಾಲಕ ತಲೆಮರೆಸಿಕೊಂಡಿದ್ದಾನೆ.

ಶಾಲಾ ಮಕ್ಕಳ ಸಾವಿಗೆ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಸಂತಾಪ ಸೂಚಿಸಿದ್ದು, ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್