ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ 
ದೇಶ

ತಾಂತ್ರಿಕ ದೋಷ: ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ 13 ಗಂಟೆ ವಿಳಂಬ; ಕಾದು-ಕಾದು ಪ್ರಯಾಣಿಕರು ಹೈರಾಣ

ಏರ್ ಇಂಡಿಯಾದಲ್ಲಿ ಮತ್ತೊಂದು ವಿಮಾನ ವಿಳಂಬ ಘಟನೆ ಬೆಳಕಿಗೆ ಬಂದಿದ್ದು, ದುಬೈಗೆ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್‍ಪ್ರೆಸ್ ವಿಮಾನ ತಾಂತ್ರಿಕ ದೋಷದಿಂದ ಬರೊಬ್ಬರಿ 13 ಗಂಟೆ ತಡವಾಗಿ ಪ್ರಯಾಣ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಮುಂಬೈ: ಏರ್ ಇಂಡಿಯಾದಲ್ಲಿ ಮತ್ತೊಂದು ವಿಮಾನ ವಿಳಂಬ ಘಟನೆ ಬೆಳಕಿಗೆ ಬಂದಿದ್ದು, ದುಬೈಗೆ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್‍ಪ್ರೆಸ್ ವಿಮಾನ ತಾಂತ್ರಿಕ ದೋಷದಿಂದ ಬರೊಬ್ಬರಿ 13 ಗಂಟೆ ತಡವಾಗಿ ಪ್ರಯಾಣ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಮುಂಬೈನಿಂದ ನಿನ್ನೆ ಮದ್ಯಾಹ್ನ ದುಬೈಗೆ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್‍ಪ್ರೆಸ್ ವಿಮಾನದ ತಾಂತ್ರಿಕ ದೋಷದಿಂದ ಇಂದು ಬೆಳಿಗ್ಗೆ 4 ಗಂಟೆಗೆ ಹೊರಟಿದೆ. ಆದರೆ ವಿಮಾನ ವಿಳಂಬದ ಹಿನ್ನಲೆಯಲ್ಲಿ 170 ಪ್ರಯಾಣಿಕರು 13 ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲೇ ಕಾದು ಪರದಾಡುವಂತಾಗಿತ್ತು.

ಮೂಲಗಳ ಪ್ರಕಾರ, ವಿಮಾನದಲ್ಲಿ ಇಂಜಿನಿಯರಿಂಗ್ ಸಂಬಂಧಿತ ಸಮಸ್ಯೆ ಇತ್ತು ಮತ್ತು ನಿರ್ವಹಣಾ ತಂಡವು ವಿಮಾನವು ಸಂಜೆ 7 ಗಂಟೆಯೊಳಗೆ ಹಾರಾಟಕ್ಕೆ ಸಿದ್ದವಾಗಲಿದೆ ಎಂದು ಹೇಳಿದರೂ ಇಂದು ಮುಂಜಾನೆ ವೇಳೆಗೆ ವಿಮಾನ ಹಾರಾಟಕ್ಕೆ ಸಿದ್ದವಾಯಿತು.

ಮುಂಬೈ ವಿಮಾನ ನಿಲ್ದಾಣದಿಂದ ನಿನ್ನೆ ಮದ್ಯಾಹ್ನ 3 ಗಂಟೆಗೆ ದುಬೈಗೆ ಟೇಕಾಫ್ ಆಗಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಈ ಘಟನೆ ನಡೆದಿದೆ. ವಿಮಾನ ಹಾರಾಟ ವಿಳಂಬದಿಂದ 170 ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ಕಾಲ ಕಳೆಯುವಂತಾಯಿತು. ಲಾಂಜ್ ಸೌಲಭ್ಯ ಸೇರಿದಂತೆ ವಿಶೇಷ ಅವಶ್ಯಕತೆಗಳನ್ನು ಹೊಂದಿರುವ ಸುಮಾರು 50 ಪ್ರಯಾಣಿಕರಿಗೆ ಅಗತ್ಯ ನೆರವು ನೀಡಲಾಗಿದೆ ಎಂದು ಏರ್ ಇಂಡಿಯಾ ಸಂಸ್ಥೆ ತಿಳಿಸಿದೆ.

ಇನ್ನು ಏರ್ ಇಂಡಿಯಾದ ಮಾಲೀಕ ಸಂಸ್ಥೆ ಟಾಟಾ ಗ್ರೂಪ್ ನಗರದಲ್ಲಿ ಕನಿಷ್ಠ ನಾಲ್ಕು ಐಷಾರಾಮಿ ಹೋಟೆಲ್‍ಗಳನ್ನು ನಿರ್ವಹಿಸುತ್ತದೆ ಮತ್ತು ಒಂದು ದೇಶೀಯ ವಿಮಾನ ನಿಲ್ದಾಣದ ಟರ್ಮಿನಲ್ ಆವರಣದಲ್ಲಿದೆ. ಇದೇ ವಿಚಾರವಾಗಿ ಮಾತನಾಡಿರುವ ಏರ್ ಇಂಡಿಯಾ ಸಂಸ್ಥೆ, 'ನಮ್ಮ ಅತಿಥಿಗಳ ತೊಂದರೆಗಳನ್ನು ಕಡಿಮೆ ಮಾಡಲು ನಾವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಿದ್ದೇವೆ, ಎಲ್ಲಾ ಅತಿಥಿಗಳಿಗೆ ಭೋಜನವನ್ನು ನೀಡಲಾಯಿತು, ನಂತರ ನಿರಂತರ ಉಪಹಾರಗಳನ್ನು ನೀಡಲಾಯಿತು. ವಿಶೇಷ ನೆರವು ಮತ್ತು ಬೆಂಬಲದ ಅಗತ್ಯವಿರುವ 50 ಅತಿಥಿಗಳಿಗೆ ಏಪೆರ್ಪೋರ್ಟ್ ಲಾಂಜ್ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ತುರ್ತು ಕಾರಣ'ಗಳಿಂದಾಗಿ ಎಲ್ಲಾ ಅಧ್ವಾನವಾಯಿತು: ವಿಮಾನಗಳ ರದ್ದತಿ ಕುರಿತು IndiGo ಸ್ಪಷ್ಟನೆ

ಪಶ್ಚಿಮ ಬಂಗಾಳ: 'ಬಾಬರಿ ಮಸೀದಿ' ನಿರ್ಮಾಣದ ಪ್ಲಾನ್, TMC ಶಾಸಕ ಹುಮಾಯೂನ್ ಕಬೀರ್ ಅಮಾನತು, ಹೊಸ ಪಕ್ಷ ರಚನೆಯ ಘೋಷಣೆ!

ಕೆಂಪೇಗೌಡ ಏರ್ ಪೋರ್ಟ್ ಲ್ಲಿ 62 ವಿಮಾನ ಸೇರಿ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದು; ಕಾರಣವೇನು?: ತನಿಖೆ ಆರಂಭಿಸಿದ DGCA

ಸಂಚಾರಿ ಸಾಥಿ ಆ್ಯಪ್: ಮೋದಿ ಸರ್ಕಾರ 'ಯೂ ಟರ್ನ್', ಮಧ್ಯಮ ವರ್ಗದ ಜನರಿಗೆ ಸಿಕ್ಕ ಅಪರೂಪದ ಜಯ! ಹೇಗೆ?

ಎಲ್ಗರ್ ಪರಿಷತ್ ಪ್ರಕರಣ: 5 ವರ್ಷಗಳ ನಂತರ DU ಮಾಜಿ ಪ್ರಾಧ್ಯಾಪಕ ಹನಿ ಬಾಬುಗೆ ಜಾಮೀನು

SCROLL FOR NEXT