ಸುಪ್ರೀಂಕೋರ್ಟ್ 
ದೇಶ

ಭಾರತದಲ್ಲಿ ಬಿಬಿಸಿ ಪ್ರಸಾರಕ್ಕೆ ನಿಷೇಧ ಕೋರಿದ್ದ ಅರ್ಜಿ ಸುಪ್ರೀಂ ಕೋರ್ಟ್ ನಿಂದ ತಿರಸ್ಕೃತ

ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರ ಮಾಡಿದ್ದ ಬ್ರಿಟಿಷ್‌ ಬ್ರಾಡ್‌ಕಾಸ್ಟಿಂಗ್‌ ಕಾರ್ಪೊರೇಷನ್‌ ಪ್ರಸಾರವನ್ನು ಭಾರತದಲ್ಲಿ ನಿಷೇಧಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರ ಮಾಡಿದ್ದ ಬ್ರಿಟಿಷ್‌ ಬ್ರಾಡ್‌ಕಾಸ್ಟಿಂಗ್‌ ಕಾರ್ಪೊರೇಷನ್‌ ಪ್ರಸಾರವನ್ನು ಭಾರತದಲ್ಲಿ ನಿಷೇಧಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ.

2002ರ ಗುಜರಾತ್‌ಗೆ ಸಂಬಂಧಿಸಿದ 'ಇಂಡಿಯಾ: ದಿ ಮೋದಿ ಕ್ವೆಶ್ಚನ್' ಎಂಬ ಶೀರ್ಷಿಕೆಯ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಮತ್ತು ಬಿಬಿಸಿ ಇಂಡಿಯಾವನ್ನು ಭಾರತೀಯ ಭೂಪ್ರದೇಶದಿಂದ ಕಾರ್ಯನಿರ್ವಹಿಸದಂತೆ ಸಂಪೂರ್ಣ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. 

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವಧಿಯ ಮೇಲೆ ದಾಳಿ ಮಾಡುವ ಬ್ರಿಟನ್ ನ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಶನ್‌ನ (ಬಿಬಿಸಿ) ಎರಡು ಭಾಗಗಳ ಸರಣಿಯು ದೇಶದಲ್ಲಿ ತೀವ್ರ ವಿವಾದ ಹುಟ್ಟುಹಾಕಿತ್ತು. ಈ ವಿವಾದಿತ ಸಾಕ್ಷ್ಯಚಿತ್ರವನ್ನುದೇಶಾದ್ಯಂತ ಹಲವು ಆಯ್ದ ವೇದಿಕೆಗಳಲ್ಲಿ ಪ್ರಸಾರ ಮಾಡಲಾಗಿತ್ತು. 

ಮೂಲಗಳ ಪ್ರಕಾರ, ಜನವರಿ 21 ರಂದು, ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಲಿಂಕ್‌ಗಳನ್ನು ಹಂಚಿಕೊಳ್ಳುವ ಬಹು ಯೂಟ್ಯೂಬ್ ವೀಡಿಯೊಗಳು ಮತ್ತು ಟ್ವಿಟರ್ ಪೋಸ್ಟ್‌ಗಳನ್ನು ನಿರ್ಬಂಧಿಸಲು ಕೇಂದ್ರವು ನಿರ್ದೇಶನಗಳನ್ನು ನೀಡಿದೆ.

‘ಇಂಡಿಯಾ: ದಿ ಮೋದಿ ಕ್ವೆಶ್ಚನ್‌’ ಎಂಬ ಸಾಕ್ಷ್ಯಚಿತ್ರವನ್ನು ಬಿಬಿಸಿ ನಿರ್ಮಿಸಿದೆ. ಸಾಕ್ಷ್ಯಚಿತ್ರದ ಒಂದು ಕಂತು ಜನವರಿ 17ರಂದು ಬಿಡುಗಡೆಯಾಗಿತ್ತು. 2002ರಲ್ಲಿ ಗುಜರಾತ್‌ನಲ್ಲಿ ನಡೆದಿದ್ದ ಗೋಧ್ರೋತ್ತರ ಹತ್ಯಾಕಾಂಡವನ್ನು ನಿಯಂತ್ರಿಸುವಲ್ಲಿ ಪೊಲೀಸರು ವಿಫಲವಾಗಿದ್ದರು. ಪೊಲೀಸರ ವೈಫಲ್ಯದಲ್ಲಿ ಗುಜರಾತ್‌ನ ಆಗಿನ ಮುಖ್ಯಮಂತ್ರಿಯಾಗಿದ್ದ ಮೋದಿ ಅವರ ಪಾತ್ರವೂ ಇತ್ತು ಎಂದು ಭಾರತದಲ್ಲಿ ಬ್ರಿಟನ್ ರಾಜತಾಂತ್ರಿಕರಾಗಿದ್ದ ಅಧಿಕಾರಿಗಳು ಹೇಳಿರುವುದನ್ನು ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT