ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚಾಲನೆ ನೀಡಿರುವ ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಥಾಣೆ ನಿಲ್ದಾಣದಲ್ಲಿ ನಿಲ್ಲಿಸಬೇಕು ಎಂದು ಶಿವಸೇನೆ-ಉದ್ಧವ್ ಬಾಲ್ ಠಾಕ್ರೆಯ ಸಂಸದ ರಾಜನ್ ವಿಚಾರೆ ಅವರು ಒತ್ತಾಯಿಸಿದ್ದಾರೆ.
ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಎರಡು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಾದ ಮುಂಬೈ-ಸೋಲಾಪುರ ಮತ್ತು ಮುಂಬೈ-ಸಾಯಿನಗರ ಶಿರಡಿಗೆ ಚಾಲನೆ ನೀಡಿದ್ದರು.
ಬಳಿಕ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಥಾಣೆ ಸಂಸದ ವಿಚಾರೆ, ಹೊಸ ವಂದೇ ಭಾರತ್ ರೈಲು ಥಾಣೆ ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆ ಮಾಡುವಂತೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮತ್ತು ಕೇಂದ್ರ ರೈಲ್ವೆ ಪ್ರಧಾನ ವ್ಯವಸ್ಥಾಪಕ ನರೇಶ್ ಲಾಲ್ವಾನಿ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.
ಪ್ರತಿನಿತ್ಯ ಏಳು ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಥಾಣೆ ರೈಲು ನಿಲ್ದಾಣವನ್ನು ಬಳಸುತ್ತಾರೆ ಎಂದು ಅವರು ಹೇಳಿದ್ದಾರೆ.