ಸುಪ್ರೀಂ ಕೋರ್ಟ್‌ಗೆ ಇಬ್ಬರು ನ್ಯಾಯಮೂರ್ತಿಗಳ ನೇಮಕ 
ದೇಶ

ಸುಪ್ರೀಂ ಕೋರ್ಟ್‌ಗೆ ಇಬ್ಬರು ನ್ಯಾಯಮೂರ್ತಿಗಳ ನೇಮಕ: ಸರ್ವೋಚ್ಛ ನ್ಯಾಯಾಲಯಕ್ಕೆ 'ಪೂರ್ಣ ಶಕ್ತಿ'

ಹೈಕೋರ್ಟ್‌ನ ಇಬ್ಬರು ಮುಖ್ಯ ನ್ಯಾಯಮೂರ್ತಿಗಳನ್ನು ಶುಕ್ರವಾರ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದ್ದು, ಈ ಮೂಲಕ ಸುಪ್ರೀಂ ಕೋರ್ಟ್‌ನ 34 ನ್ಯಾಯಮೂರ್ತಿಗಳ ಸ್ಥಾನಗಳೂ ಭರ್ತಿಯಾದಂತಾಗಿದೆ.

ನವದೆಹಲಿ: ಹೈಕೋರ್ಟ್‌ನ ಇಬ್ಬರು ಮುಖ್ಯ ನ್ಯಾಯಮೂರ್ತಿಗಳನ್ನು ಶುಕ್ರವಾರ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದ್ದು, ಈ ಮೂಲಕ ಸುಪ್ರೀಂ ಕೋರ್ಟ್‌ನ 34 ನ್ಯಾಯಮೂರ್ತಿಗಳ ಸ್ಥಾನಗಳೂ ಭರ್ತಿಯಾದಂತಾಗಿದೆ.

ಈ ಬಗ್ಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ‘ಭಾರತದ ಸಂವಿಧಾನದ ನಿಬಂಧನೆಗಳ ಪ್ರಕಾರ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳು ಇಬ್ಬರು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಿಸಿದ್ದಾರೆ. ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್, ಗುಜರಾತ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಗಿದೆ. ಅವರಿಗೆ ನನ್ನ ಶುಭಾಶಯಗಳು’ ಎಂದು ಟ್ವೀಟ್ ಮಾಡಿದ್ದಾರೆ.

ಇಬ್ಬರ ಹೆಸರುಗಳನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಕಳೆದ ತಿಂಗಳು ಶಿಫಾರಸು ಮಾಡಿತ್ತು. ಅವರು ಪ್ರಮಾಣವಚನ ಸ್ವೀಕರಿಸಿದ ನಂತರ, ಮುಖ್ಯ ನ್ಯಾಯಮೂರ್ತಿಯೂ ಸೇರಿದಂತೆ 34 ನ್ಯಾಯಾಧೀಶರ ಸಂಪೂರ್ಣ ಬಲವನ್ನು ಸುಪ್ರೀಂ ಕೋರ್ಟ್‌ ಪಡೆದುಕೊಳ್ಳಲಿದೆ. ಕಳೆದ ವಾರ ಸುಪ್ರೀಂ ಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳು ನೇಮಕಗೊಂಡಿದ್ದರು.

ಕರ್ನಾಟಕ ಮೂಲದ ನ್ಯಾ. ಅರವಿಂದ್‌ ಕುಮಾರ್ ಅವರನ್ನು 2021ರ ಅಕ್ಟೋಬರ್‌ನಲ್ಲಿ ಗುಜರಾತ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಿ ಪದೋನ್ನತಿ ನೀಡಲಾಗಿತ್ತು.  ರಾಜೇಶ್‌ ಬಿಂದಾಲ್‌ ಅವರು ಸದ್ಯ ಅಲಾಹಾಬಾದ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿದ್ದು, ಅರವಿಂದ್‌ ಕುಮಾರ್‌ ಅವರು ಗುಜರಾತ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಈ ಇಬ್ಬರ ಹೆಸರನ್ನು ಸುಪ್ರೀಂ ಕೋರ್ಟ್‌ ಕೊಲಿಜಿಯಂ ಜನವರಿ 31ರಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು.

2006ರ ಮಾರ್ಚ್‌ನಲ್ಲಿ ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದ ರಾಜೇಶ್‌ ಬಿಂದಾಲ್‌ ಅವರನ್ನು 2021ರ ಅಕ್ಟೋಬರ್‌ನಲ್ಲಿ ಅಲಾಹಾಬಾದ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿತ್ತು. ಹಿರಿತನದ ಆಧಾರದಲ್ಲಿ ನೋಡುವುದಾದರೆ ದೇಶದ ಎಲ್ಲಾ ಹೈಕೋರ್ಟ್‌ಗಳ ನ್ಯಾಯಮೂರ್ತಿಗಳ ಪೈಕಿ ಪೈಕಿ ನ್ಯಾ. ಬಿಂದಾಲ್‌ ಅವರು ಎರಡನೇ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ.

ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ ಮೂಲದವರಾದ ನ್ಯಾ. ಬಿಂದಾಲ್‌ ಅವರ ಹೆಸರನ್ನು ಶಿಫಾರಸ್ಸು ಮಾಡುವಾಗ ದೇಶದ ದೊಡ್ಡ ಹೈಕೋರ್ಟ್‌ಗಳಲ್ಲಿ ಒಂದಾದ ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಸೂಕ್ತ ಆದ್ಯತೆ ಸಿಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್‌ ಕೊಲಿಜಿಯಂ ಹೇಳಿತ್ತು. 2009ರ ಜೂನ್‌ನಲ್ಲಿ ಅರವಿಂದ್‌ ಕುಮಾರ್‌ ಅವರನ್ನು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿದ್ದು, 2012ರ ಡಿಸೆಂಬರ್‌ನಲ್ಲಿ ಕಾಯಂಗೊಳಿಸಲಾಗಿತ್ತು. 2021ರ ಅಕ್ಟೋಬರ್‌ನಲ್ಲಿ ನ್ಯಾ. ಅರವಿಂದ್ ಕುಮಾರ್‌ ಅವರನ್ನು ಗುಜರಾತ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನಾಗಿಸಿ ಪದೋನ್ನತಿ ನೀಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT