ದೇಶ

ಅದಾನಿ ವಿವಾದ: ಬಿಜೆಪಿ ಕೇಂದ್ರ ಕಚೇರಿಯ ಹೊರಗೆ ಎಎಪಿ ಪ್ರತಿಭಟನೆ

Lingaraj Badiger

ನವದೆಹಲಿ: ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಲ್ಲಿ ಅದಾನಿ ಗ್ರೂಪ್ ವಿರುದ್ಧ ವಿರುದ್ಧ ವಂಚನೆ ಆರೋಪ ಕೇಳಿಬಂದಿದ್ದು, ಆ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿ ಆಮ್ ಆದ್ಮಿ ಪಕ್ಷ ಭಾನುವಾರ ದೆಹಲಿಯ ಭಾರತೀಯ ಜನತಾ ಪಕ್ಷದ ಪ್ರಧಾನ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿತು.

ವಿವಿಧ ಪಕ್ಷಗಳ ಸದಸ್ಯರನ್ನೊಳಗೊಂಡ ಸಂಸದೀಯ ಜಂಟಿ ಸಮಿತಿ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಎಎಪಿ ದೆಹಲಿ ಸಂಚಾಲಕ ಗೋಪಾಲ್ ರೈ ಅವರು ಒತ್ತಾಯಿಸಿದ್ದಾರೆ.

ತನಿಖೆಯಿಂದ ಬಿಜೆಪಿ ಓಡಿಹೋಗುತ್ತಿದೆ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತ್ರ ಯಾವುದೇ ತನಿಖೆಗೆ ಹೆದರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಅಮೆರಿಕ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್‌ಬರ್ಗ್‌ ರಿಸರ್ಚ್‌ ವರದಿಯ ಬಳಿಕ ಅದಾನಿ ಕಂಪನಿಯ ಷೇರುಗಳ ಬೆಲೆಯಲ್ಲಿ ಭಾರಿ ಕುಸಿತವಾಗಿದ್ದು, ಅದಾನಿ ಸಮೂಹ ಸಂಸ್ಥೆಗಳಲ್ಲಿ ಎಲ್‌ಐಸಿ ಸಹ ಹೂಡಿಕೆ ಮಾಡಿದೆ. 

ಎಲ್‌ಐಸಿ ಮತ್ತು ಎಸ್‌ಬಿಐ ಅದಾನಿ ಗ್ರೂಪ್ ನಲ್ಲಿ ಹೂಡಿಕೆ ಮಾಡಿರುವುದರಿಂದ ಸಾಮಾನ್ಯ ಜನರ ಹಣ ಒಳಗೊಂಡಿರುವ ಅತಿ ದೊಡ್ಡ ಹಗರಣವಾಗಿದೆ ಎಂದು ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ಆರೋಪಿಸಿವೆ.

SCROLL FOR NEXT