ಅಂಬೇಡ್ಕರ್ ಪ್ರತಿಮೆ ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಕನೌಜ್‌ನಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ

ಕನೌಜ್ ನ ಸರಾಯ್ ಪ್ರಯಾಗ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಕನೌಜ್: ಕನೌಜ್ ನ ಸರಾಯ್ ಪ್ರಯಾಗ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಈ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಆರೋಪಿಗಳನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಶನಿವಾರ ರಾತ್ರಿ ಗುರ್ಸಹೈಗಂಜ್ ಪ್ರದೇಶದಲ್ಲಿರುವ ಅಂಬೇಡ್ಕರ್ ಪ್ರತಿಮೆಯನ್ನು ಕೆಲವು ದುಷ್ಕರ್ಮಿಗಳು ಹಾನಿಗೊಳಿಸಿದ್ದಾರೆ.

ದುಷ್ಕರ್ಮಿಗಳು ಶಾಂತಿ ಕದಡುವ ಯತ್ನ ನಡೆಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕುನ್ವರ್ ಅನುಪಮ್ ಸಿಂಗ್ ಹೇಳಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹಾಗೂ ಹೊಸ ಪ್ರತಿಮೆ ಸ್ಥಾಪಿಸುವುದಾಗಿ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.

ಹಾನಿಗೊಳಗಾದ ಪ್ರತಿಮೆಯ ಜಾಗದಲ್ಲಿ ಹೊಸ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಎಸ್ಪಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT