ದೇಶ

ಬಜೆಟ್ ಅಧಿವೇಶನ: ನಾಳೆ ಪ್ರತಿಪಕ್ಷಗಳ ಸಭೆ ಕರೆದ ಮಲ್ಲಿಕಾರ್ಜುನ ಖರ್ಗೆ

Lingaraj Badiger

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ "ಸಮಾನ ಮನಸ್ಕ" ಪ್ರತಿಪಕ್ಷಗಳ ಸಭೆ ಕರೆದಿದ್ದಾರೆ.

ರಾಜ್ಯಸಭೆ ಕಲಾಪ ಆರಂಭಕ್ಕೂ ಮುನ್ನ ಸಂಸತ್ತಿನಲ್ಲಿರುವ ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಯಲಿದೆ.

ನಾಳೆ ರಾಜ್ಯಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಕಾರ್ಯತಂತ್ರವನ್ನು ರೂಪಿಸಲು ಈ ಸಭೆ ಕರೆಯಲಾಗಿದೆ ಎಂದು ನಂಬಲಾಗಿದೆ.

ಅಮೆರಿಕ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್‌ಬರ್ಗ್‌ ರಿಸರ್ಚ್‌ ವರದಿ ಹಿನ್ನೆಲೆಯಲ್ಲಿ ಅದಾನಿ ಗ್ರೂಪ್‌ನ ವ್ಯವಹಾರಗಳ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ''ಅದಾನಿ ಹಗರಣದ ಬಗ್ಗೆ ತನಿಖೆ ನಡೆಸಬೇಕಲ್ಲವೇ? ಜೆಪಿಸಿಗೆ ವಿಷಯ ತಿಳಿಸಬೇಕಲ್ಲವೇ? ಸಾರ್ವಜನಿಕ ವಲಯದ ಬ್ಯಾಂಕ್ ಗಳು ಅದಾನಿ ಗ್ರೂಪ್ ನಲ್ಲಿ ಹೂಡಿಕೆ ಮಾಡಿರುವ ಹಣದ ಬಗ್ಗೆ ಚರ್ಚೆ ಬೇಡವೇ? ಸಾರ್ವಜನಿಕರ ಹಣ ಇದರಲ್ಲಿ ಸೇರಿದೆ, ಅದಾನಿ ಗ್ರೂಪ್ ಬಗ್ಗೆ ತನಿಖೆ ನಡೆಸಲು ಸರ್ಕಾರಕ್ಕೆ ಏನು ಸಮಸ್ಯೆ? ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಅವರು ಅದಾನಿ ಸಮೂಹದ ಏಜೆಂಟರಂತೆ ವರ್ತಿಸಿದ್ದಾರೆ ಎಂದು ಖರ್ಗೆ ಆರೋಪಿಸಿದ್ದಾರೆ.

SCROLL FOR NEXT