ದೇಶ

ಅಸ್ಸಾಂನ ಕೆಲವು ಭಾಗಗಳಲ್ಲಿ ಭೂಕಂಪ, ಯಾವುದೇ ಜೀವ ಹಾನಿ ಇಲ್ಲ

Lingaraj Badiger

ದಿಸ್ಪುರ: ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪಕ್ಕೆ 28 ಸಾವಿರಕ್ಕೂ ಹೆಚ್ಚು ಜನ ಸಾವಿಗೀಡಾಗಿರುವ ಬೆನ್ನಲ್ಲೇ  ಅಸ್ಸಾಂನ ಕೆಲವು ಭಾಗಗಳಲ್ಲಿ ರಿಕ್ಟರ್ ಮಾಪನದಲ್ಲಿ 4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಧಿಕೃತ ಬುಲೆಟಿನ್ ತಿಳಿಸಿದೆ.

ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಇಂದು ಸಂಜೆ 4:18 ಕ್ಕೆ ಭೂಮಿ ಕಂಪಿಸಿದ್ದು, ಬ್ರಹ್ಮಪುತ್ರ ನದಿಯ ದಕ್ಷಿಣ ದಂಡೆಯಲ್ಲಿರುವ ನಾಗಾನ್ ಜಿಲ್ಲೆಯ ಕೆಲವು ಭಾಗಗಳಲ್ಲಿ ಭೂಕಂಪವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಹೇಳಿದೆ.

ಕೇಂದ್ರ ಅಸ್ಸಾಂನ ಹೊಜೈ ಬಳಿ ಗುವಾಹಟಿಯಿಂದ ಪೂರ್ವಕ್ಕೆ 160 ಕಿಮೀ ದೂರದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ.

SCROLL FOR NEXT