ರಾಹುಲ್ ಗಾಂಧಿ vs ಪ್ರಧಾನಿ ಮೋದಿ 
ದೇಶ

ಪ್ರಧಾನಿ ಮೋದಿ ಕುರಿತು ಅವಹೇಳನ: ಸ್ಪಷ್ಟನೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನೋಟಿಸ್

ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನೋಟಿಸ್ ನೀಡಲಾಗಿದೆ.

ನವದೆಹಲಿ: ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನೋಟಿಸ್ ನೀಡಲಾಗಿದೆ.

ಬಿಜೆಪಿಯ ನಿಶಿಕಾಂತ್ ದುಬೆ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಕಾಂಗ್ರೆಸ್ ಸಂಸದರಿಂದ ವಿಶೇಷ ಹಕ್ಕು ಉಲ್ಲಂಘನೆ ಆರೋಪದ ಮೇಲೆ ಲೋಕಸಭೆ ಸೆಕ್ರೆಟರಿಯೇಟ್ ಗೆ ದೂರು ದಾಖಲಿಸಿದ್ದರು. ಇದೀಗ ಪ್ರಕರಣ ಸಂಬಂಧ ಸ್ಪಷ್ಟನೆ ನೀಡುವಂತೆ ಲೋಕಸಭೆ ಸೆಕ್ರೆಟರಿಯೇಟ್ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ರಾಹುಲ್ ಗಾಂಧಿ ಅವರು ಬುಧವಾರದೊಳಗೆ ಈ ಸಂಬಂಧ ಪ್ರತಿಕ್ರಿಯಿಸಬೇಕು ಎಂದು ಲೋಕಸಭೆ ಸಚಿವಾಲಯ ತಿಳಿಸಿದೆ.

ರಾಹುಲ್ ಗಾಂಧಿಯವರು ಈ ವಾರದ ಆರಂಭದಲ್ಲಿ ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿಕೊಂಡು ಸಂಸತ್ ನಲ್ಲಿ ಟೀಕಾಪ್ರಹಾರ ನಡೆಸಿದ್ದರು. ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸುವಾಗ, ಉದ್ಯಮಿ ಗೌತಮ್ ಅದಾನಿ ಅವರೊಂದಿಗಿನ ಸಂಬಂಧವನ್ನು ಪ್ರಶ್ನಿಸಿದ್ದರು. 2014 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅದಾನಿ ಅವರ ಅದೃಷ್ಟದಲ್ಲಿ ಉಲ್ಕಾಪಾತದ ಏರಿಕೆಯನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಪ್ರಧಾನ ಮಂತ್ರಿ ಕ್ರೋನಿ ಕ್ಯಾಪಿಟಲಿಸಂ ಎಂದು ಆರೋಪಿಸಿದ್ದರು. ಅಲ್ಲದೆ ಮೋದಿ ಜೊತೆಗಿನ ಸ್ನೇಹದಿಂದಾಗಿಯೇ ಅದಾನಿ ಸಂಪತ್ತು ಗಣನೀಯವಾಗಿ ಏರಿಕೆಯಾಗಿದೆ. ಪ್ರಧಾನಿ ಮೋದಿ ತಮ್ಮ ಅಧಿಕಾರದ ದುರ್ಬಳಕೆ ಮಾಡಿ ಅದಾನಿಗೆ ನೆರವಾಗಿದ್ದಾರೆ ಎಂಬರ್ಥದಲ್ಲಿ ಗಂಭೀರ ಆರೋಪ ಮಾಡಿದ್ದರು.

ಇನ್ನು ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ, ಅವರ ಹೇಳಿಕೆಗಳು ಅವಹೇಳನಕಾರಿ, ಅಸಂಸದೀಯ ಮತ್ತು ದಾರಿತಪ್ಪಿಸುವಂತಿವೆ ಎಂದು ಆರೋಪಿಸಿದೆ. ಇದೇ ವಿಚಾರವಾಗಿ ಬಿಜೆಪಿಯ ನಿಶಿಕಾಂತ್ ದುಬೆ ಅವರು ರಾಹುಲ್ ಗಾಂಧಿ ವಿರುದ್ಧ ವಿಶೇಷ ಹಕ್ಕು ಉಲ್ಲಂಘನೆಯ ನೋಟಿಸ್ ನೀಡಿದ್ದರು. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಲೋಕಸಭೆಯ ಸ್ಪೀಕರ್‌ಗೆ ಪತ್ರ ಬರೆದು ನಿಯಮ 380 ರ ಅಡಿಯಲ್ಲಿ ರಾಹುಲ್ ಗಾಂಧಿಯವರ "ಅಸಂಸದೀಯ, ಅಪ್ರಾಮಾಣಿಕ ಆರೋಪಗಳನ್ನು" ಸದನದ ಕಲಾಪದಿಂದ ತೆಗೆದುಹಾಕಬೇಕು ಎಂದು ಹೇಳಿದ್ದಾರೆ. ಈ ವಾರದ ಆರಂಭದಲ್ಲಿ ಅವರ ಹೇಳಿಕೆಗಳನ್ನು ಕಡತದಿಂದ ತೆಗೆದುಹಾಕಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT