ಪ್ರಾತಿನಿಧಿಕ ಚಿತ್ರ 
ದೇಶ

ಕೆಮ್ಮುತ್ತಿದ್ದ ಎರಡು ತಿಂಗಳ ಹೆಣ್ಣು ಮಗುವಿಗೆ ಬಿಸಿ ಕಬ್ಬಿಣದ ರಾಡ್‌ನಿಂದ ಬರೆ; ನಕಲಿ ವೈದ್ಯನ ಬಂಧನ

ಗುಜರಾತ್‌ನ ಪೋರಬಂದರ್ ಜಿಲ್ಲೆಯಲ್ಲಿ ಕೆಮ್ಮಿಗೆ ಚಿಕಿತ್ಸೆ ನೀಡಲು ಎರಡು ತಿಂಗಳ ಹೆಣ್ಣು ಮಗುವಿಗೆ ನಕಲಿ ವೈದ್ಯರು ಬಿಸಿಯಾದ ಕಬ್ಬಿಣದ ರಾಡ್‌ನಿಂದ ಬರೆ ಎಳೆದ ನಂತರ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಪೋರಬಂದರ್: ಗುಜರಾತ್‌ನ ಪೋರಬಂದರ್ ಜಿಲ್ಲೆಯಲ್ಲಿ ಕೆಮ್ಮಿಗೆ ಚಿಕಿತ್ಸೆ ನೀಡಲು ಎರಡು ತಿಂಗಳ ಹೆಣ್ಣು ಮಗುವಿಗೆ ನಕಲಿ ವೈದ್ಯರು ಬಿಸಿಯಾದ ಕಬ್ಬಿಣದ ರಾಡ್‌ನಿಂದ ಬರೆ ಎಳೆದ ನಂತರ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಆರೋಪಿಯನ್ನು ಭಾನುವಾರ ಬಂಧಿಸಲಾಗಿದ್ದು, ಆತನ ಮತ್ತು ಮಗುವಿನ ತಾಯಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಸುರ್ಜೀತ್ ಮಹೇದು ತಿಳಿಸಿದ್ದಾರೆ.

ಮಗುವನ್ನು ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿದೆ. ಆಕೆಯನ್ನು ನಿಗಾದಲ್ಲಿರಿಸಲಾಗಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಒಂದು ವಾರದ ಹಿಂದೆ ಮಗು ಕೆಮ್ಮು ಮತ್ತು ಕಫದಿಂದ ಬಳಲುತ್ತಿದ್ದು, ಆಕೆಯ ಪೋಷಕರು ಮನೆಯಲ್ಲಿ ಸ್ಥಳೀಯ ನಾಟಿ ಚಿಕಿತ್ಸೆ ನೀಡಿಸಲು ಪ್ರಯತ್ನಿಸಿದರು. ಆದರೆ, ಆಕೆಗೆ ಪರಿಹಾರ ಸಿಕ್ಕಿಲ್ಲ. ನಂತರ, ಮಗುವಿನ ತಾಯಿ ಅವಳನ್ನು ದೇವರಾಜಭಾಯ್ ಕಟಾರಾ ಬಳಿಗೆ ಕರೆದೊಯ್ದಿದ್ದಾರೆ ಎಂದು ಮಹೇದು ಹೇಳಿದರು.

ಕತಾರಾ, ಮಗುವಿನ ಎದೆ ಮತ್ತು ಹೊಟ್ಟೆಯ ಮೇಲೆ ಬಿಸಿಯಾದ ಕಬ್ಬಿಣದ ರಾಡ್‌ನಿಂದ ಬರೆ ಎಳೆದಿದ್ದಾರೆ. ಅದರಿಂದಲೂ ಪ್ರಯೋಜನವಾಗದಿದ್ದಾಗ, ಪೋಷಕರು ಮಗುವನ್ನು ಪೋರಬಂದರ್‌ನ ಭಾವಸಿಂಹಜಿ ಜನರಲ್ ಆಸ್ಪತ್ರೆಗೆ ಕರೆದೊಯ್ದಾಗ ವಿಚಾರ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದರು.

ಶಿಶುವಿನ ತಂದೆ ನೀಡಿದ ದೂರಿನ ಆಧಾರದ ಮೇಲೆ, ಭಾರತೀಯ ದಂಡ ಸಂಹಿತೆ ಸೆಕ್ಷನ್ 324 (ಸಾವಿಗೆ ಕಾರಣವಾಗುವ ಯಾವುದೇ ಸಾಧನದ ಮೂಲಕ ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು) ಮತ್ತು ಇತರ ನಿಬಂಧನೆಗಳ ಅಡಿಯಲ್ಲಿ ಕತಾರಾ ಮತ್ತು ಮಗುವಿನ ತಾಯಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪೋರಬಂದರ್‌ನಲ್ಲಿರುವ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿರುವ ಮಗುವಿನ ಸ್ಥಿತಿ ಸ್ಥಿರವಾಗಿದೆ ಎಂದು ಅವರು ಹೇಳಿದರು.

ಫೆಬ್ರುವರಿ 9 ರಂದು ಉಸಿರಾಟದ ತೊಂದರೆಯೊಂದಿಗೆ ಮಗುವನ್ನು ಆಸ್ಪತ್ರೆಗೆ ಕರೆತರಲಾಯಿತು. ಆಕೆಯನ್ನು ಐಸಿಯುನಲ್ಲಿಟ್ಟು ಆಕ್ಸಿಜನ್ ಬೆಂಬಲ ನೀಡಲಾಗಿದ್ದು, ಚಿಕಿತ್ಸೆಯ ಸಮಯದಲ್ಲಿ, ಆಕೆಯ ಎದೆಯ ಮೇಲೆ ಬರೆ ಎಳೆದಿರುವುದನ್ನು ನಾವು ಕಂಡುಕೊಂಡಿದ್ದೇವೆ ಎಂದು ಜನರಲ್ ಆಸ್ಪತ್ರೆಯ ಡಾ ಜೈ ಬದಿಯಾನಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ಎರಡೂವರೆ ತಿಂಗಳ ಬಾಲಕಿಗೆ ಭೂತ ಬಿಡಿಸುವವನಿಂದ 50ಕ್ಕೂ ಹೆಚ್ಚು ಬಾರಿ ಬಿಸಿಯಾದ ಕಬ್ಬಿಣದ ರಾಡ್‌ನಿಂದ ಎಳೆಸಿಕೊಂಡ ನಂತರ ಮೃತಪಟ್ಟಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

3 ತಿಂಗಳ ಹೆಣ್ಣು ಮಗುವಿಗೆ ಕಾದ ಕಬ್ಬಿಣದ ರಾಡ್‌ನಿಂದ ಬರೆ ಎಳೆದ ಮತ್ತೊಂದು ಪ್ರಕರಣವೂ ಶಹದೋಲ್‌ನಲ್ಲಿ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT