ತ್ರಿಪುರಾದಲ್ಲಿ ಮತದಾನ 
ದೇಶ

ವಿಧಾನಸಭೆ ಚುನಾವಣೆ: ತ್ರಿಪುರಾದಲ್ಲಿ ಶೇ.81.10ರಷ್ಟು ಮತದಾನ

ತ್ರಿಪುರಾ ವಿಧಾನಸಭೆ ಚುನಾವಣೆಗೆ ನಡೆದ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು ಸುಮಾರು  ಶೇ.81.10ರಷ್ಟು ಮತದಾನವಾಗಿದೆ ಎನ್ನಲಾಗಿದೆ.

ನವದೆಹಲಿ: ತ್ರಿಪುರಾ ವಿಧಾನಸಭೆ ಚುನಾವಣೆಗೆ ನಡೆದ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು ಸುಮಾರು  ಶೇ.81.10ರಷ್ಟು ಮತದಾನವಾಗಿದೆ ಎನ್ನಲಾಗಿದೆ.

60 ಸದಸ್ಯ ಬಲದ ತ್ರಿಪುರಾ ವಿಧಾನಸಭೆಗೆ ನಡೆಯುತ್ತಿರುವ  ಚುನಾವಣೆಯಲ್ಲಿ ತ್ರಿಪುರಾದಲ್ಲಿ ಭಾರೀ ಮತದಾನ ನಡೆದಿದೆ. ಮತದಾನ ಮುಕ್ತಾಯದ ವೇಳೆಗೆ ಶೇ.81% ಕ್ಕಿಂತ ಹೆಚ್ಚು ಮತದಾನವಾಗಿದೆ. ಅಂತಿಮ ಅಂಕಿ-ಅಂಶಗಳು ಬಂದಾಗ ಆ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಮಾರ್ಚ್ 2 ರಂದು ಮತಗಳ ಎಣಿಕೆ ನಡೆಯಲಿದೆ.

ಮತದಾನದ ವೇಳೆ ನಡೆದ ಪ್ರತ್ಯೇಕ ಹಿಂಸಾಚಾರದಲ್ಲಿ ಸಿಪಿಐ(ಎಂ) ನಾಯಕ ಮತ್ತು ಎಡಪಕ್ಷದ ಇಬ್ಬರು ಪೋಲಿಂಗ್ ಏಜೆಂಟ್‌ಗಳು ಸೇರಿದಂತೆ ಕನಿಷ್ಠ ಮೂವರು ಗಾಯಗೊಂಡಿದ್ದಾರೆ. 40-45 ಸ್ಥಳಗಳಲ್ಲಿ ಇವಿಎಂ ಅಸಮರ್ಪಕ ನಿರ್ವಹಣೆ ಕಾರ್ಯಗಳು ವರದಿಯಾಗಿವೆ. 'ಬಿಜೆಪಿ ಪರವಾಗಿ ಕಿಡಿಗೇಡಿಗಳು' ಜನರು ಮತದಾನ ಮಾಡದಂತೆ ತೊಂದರೆ ನೀಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಮಾಣಿಕ್ ಸರ್ಕಾರ್ ಆರೋಪಿಸಿದ್ದಾರೆ. ತಿಪ್ರಾ ಮೋಥಾ ಮುಖ್ಯಸ್ಥ ಪ್ರದ್ಯೋತ್ ದೆಬ್ಬರ್ಮಾ ಕೂಡ ಆಡಳಿತ ಪಕ್ಷವನ್ನು ದೂಷಿಸಿದ್ದಾರೆ.

ಬಿಜೆಪಿ-ಐಪಿಎಫ್‌ಟಿ, ಸಿಪಿಐ(ಎಂ)-ಕಾಂಗ್ರೆಸ್ ಮೈತ್ರಿಕೂಟ ಮತ್ತು ಹೊಸ ಆಟಗಾರ ತಿಪ್ರಾ ಮೋಥಾ ನಡುವೆ ತ್ರಿಕೋನ ಹೋರಾಟವಿದೆ. ತ್ರಿಪುರಾದಲ್ಲಿ ಅಧಿಕಾರ ಉಳಿಸಿಕೊಳ್ಳಲು ಹವಣಿಸುತ್ತಿರುವ ಬಿಜೆಪಿ 55 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. CPI(M) 47 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ, ಅದರ ಮಿತ್ರಪಕ್ಷ ಕಾಂಗ್ರೆಸ್ 13 ರಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಹಿಂದಿನ ರಾಜಮನೆತನದ ಕುಡಿ ಪ್ರದ್ಯೋತ್ ದೆಬ್ಬರ್ಮಾ ನೇತೃತ್ವದ TIPRA Motha 42 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ತೃಣಮೂಲ ಕಾಂಗ್ರೆಸ್ 28 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 60 ಸದಸ್ಯ ಬಲದ ತ್ರಿಪುರ ವಿಧಾನಸಭೆಗೆ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿತ್ತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT