ಕೇಂದ್ರ ಸಚಿವೆ ಸ್ಮೃತಿ ಇರಾನಿ 
ದೇಶ

ಜಾರ್ಜ್ ಸೊರೊಸ್ ಹೇಳಿಕೆ ಭಾರತದ ಪ್ರಜಾಪ್ರಭುತ್ವದ ಮೇಲಿನ ದಾಳಿ: ಬಿಜೆಪಿ

ಹಿಂಡೆನ್‌ಬರ್ಗ್ ವರದಿಯ ನಂತರ ಉದ್ಯಮಿ ಗೌತಮ್ ಅದಾನಿ ಅವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಇದರಿಂದ ಪ್ರಧಾನಿ ನರೇಂದ್ರ ಮೋದಿ ದುರ್ಬಲರಾಗಲಿದ್ದಾರೆ ಎಂದಿದ್ದ ಬಿಲಿಯನೇರ್ ಹೂಡಿಕೆದಾರ ಜಾರ್ಜ್ ಸೊರೊಸ್ ವಿರುದ್ಧ ಬಿಜೆಪಿ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದೆ.

ನವದೆಹಲಿ: ಹಿಂಡೆನ್‌ಬರ್ಗ್ ವರದಿಯ ನಂತರ ಉದ್ಯಮಿ ಗೌತಮ್ ಅದಾನಿ ಅವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಇದರಿಂದ ಪ್ರಧಾನಿ ನರೇಂದ್ರ ಮೋದಿ ದುರ್ಬಲರಾಗಲಿದ್ದಾರೆ ಎಂದಿದ್ದ ಬಿಲಿಯನೇರ್ ಹೂಡಿಕೆದಾರ ಜಾರ್ಜ್ ಸೊರೊಸ್ ವಿರುದ್ಧ ಬಿಜೆಪಿ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದೆ.

ಜಾರ್ಜ್ ಸೊರೊಸ್ ಹೇಳಿಕೆ ಭಾರತದ ಪ್ರಜಾಪ್ರಭುತ್ವ ಮೇಲಿನ ದಾಳಿಯಾಗಿದ್ದು, ನಮ್ಮ ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಮಧ್ಯ ಪ್ರವೇಶಿಸಲು ಯತ್ನಿಸುವ ವಿದೇಶಿ ಶಕ್ತಿಗಳಿಗೆ ಒಗ್ಗಟ್ಟಾಗಿ ಪ್ರತಿಕ್ರಿಯಿಸುವಂತೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಕರೆ ನೀಡಿದ್ದಾರೆ.

ಇಂಗ್ಲೆಂಡ್ ಬ್ಯಾಂಕ್ ಅನ್ನು ದೋಚಿ ಆರ್ಥಿಕ ಯುದ್ಧ ಅಪರಾಧಿ ಎಂದು ಘೋಷಿಸಲಾಗಿರುವ ವ್ಯಕ್ತಿ ಈಗ ಭಾರತದ ಪ್ರಜಾಪ್ರಭುತ್ವವನ್ನು ಒಡೆಯುವ ಬಯಕೆ ವ್ಯಕ್ತಪಡಿಸಿದ್ದಾರೆ ಎಂದು ಕೇಂದ್ರ ಸಚಿವೆ ಜಾರ್ಜ್ ಸೊರೊಸ್ ಅವರನ್ನು ಉಲ್ಲೇಖಿಸಿ ತಿರುಗೇಟು ನೀಡಿದ್ದಾರೆ.

"ಅಂತರಾಷ್ಟ್ರೀಯ ವಾಣಿಜ್ಯೋದ್ಯಮಿ ಜಾರ್ಜ್ ಸೊರೊಸ್ ಅವರು ಭಾರತದ ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳಲ್ಲಿ ಮಧ್ಯಪ್ರವೇಶಿಸುವ ತನ್ನ ಕೆಟ್ಟ ಉದ್ದೇಶವನ್ನು ಸ್ಪಷ್ಟಪಡಿಸಿದ್ದಾರೆ ಎಂದು ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.

ಇಂದು, ಒಬ್ಬ ನಾಗರಿಕನಾಗಿ, ನಮ್ಮ ಪ್ರಜಾಪ್ರಭುತ್ವವನ್ನು ರಾಕ್ಷಸೀಕರಿಸಲು ಪ್ರಯತ್ನಿಸುವ ಮತ್ತು ಭಾರತದ ಆರ್ಥಿಕತೆಯನ್ನು ದುರ್ಬಲಗೊಳಿಸುವ ಈ ವ್ಯಕ್ತಿಯ ಉದ್ದೇಶವನ್ನು ಖಂಡಿಸುವಂತೆ ಪ್ರತಿಯೊಬ್ಬ ಭಾರತೀಯ, ಸಂಸ್ಥೆ, ಸಮಾಜಕ್ಕೆ ಕರೆ ನೀಡುತ್ತೇನೆ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

"ಅದಾನಿ ವಿರುದ್ಧದ ಆರೋಪಗಳ ಬಗ್ಗೆ ಪ್ರಧಾನಿ ಮೋದಿ ಅವರು ಮೌನವಾಗಿದ್ದಾರೆ. ಆದರೆ ಅವರು ವಿದೇಶಿ ಹೂಡಿಕೆದಾರರ ಪ್ರಶ್ನೆಗಳಿಗೆ ಮತ್ತು ಸಂಸತ್ತಿನಲ್ಲಿ ಉತ್ತರಿಸಬೇಕಾಗುತ್ತದೆ" ಎಂದು ಸೊರೊಸ್ ಅವರು ಮ್ಯೂನಿಚ್ ಭದ್ರತಾ ಸಮ್ಮೇಳನದ ಭಾಷಣದಲ್ಲಿ ಹೇಳಿದ್ದರು.

"ಇದು ಭಾರತದ ಒಕ್ಕೂಟ ಸರ್ಕಾರದ ಮೇಲೆ ಮೋದಿಯವರ ಹಿಡಿತವನ್ನು ಗಮನಾರ್ಹವಾಗಿ ದುರ್ಬಲಗೊಳಿಸುತ್ತದೆ ಮತ್ತು ಹೆಚ್ಚು ಅಗತ್ಯವಿರುವ ಸಾಂಸ್ಥಿಕ ಸುಧಾರಣೆಗಳಿಗೆ ಬಾಗಿಲು ತೆರೆಯುತ್ತದೆ. ನಾನು ಅನನುಭವಿ ಆಗಿರಬಹುದು, ಆದರೆ ಭಾರತದಲ್ಲಿ ಪ್ರಜಾಪ್ರಭುತ್ವದ ಪುನರುಜ್ಜೀವನ ನಿರೀಕ್ಷಿಸುತ್ತೇನೆ" ಎಂದು ಸೊರೊಸ್ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT