ಮೂವರು ಭೂಗತ ಕಾರ್ಯಕರ್ತರ ಬಂಧನ 
ದೇಶ

ಕಾಶ್ಮೀರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮೂವರು ಭೂಗತ ಕಾರ್ಯಕರ್ತರ ಬಂಧನ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್‌ ಉಗ್ರ ಸಂಘಟನೆಗೆ ಸೇರಿದ ಮೂವರು ಭೂಗತ ಕಾರ್ಯಕರ್ತರನ್ನು(ಒಜಿಡಬ್ಲ್ಯೂ) ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್‌ ಉಗ್ರ ಸಂಘಟನೆಗೆ ಸೇರಿದ ಮೂವರು ಭೂಗತ ಕಾರ್ಯಕರ್ತರನ್ನು(ಒಜಿಡಬ್ಲ್ಯೂ) ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬಂಧಿತರನ್ನು ಮೊಹಮ್ಮದ್ ಅಬಾಸ್ ವಾಗೆ, ಗೌಹರ್ ಶಾಫಿ ಮಿರ್ ಮತ್ತು ನಿಸಾರ್ ರೆಹಮಾನ್ ಶೇಖ್ ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ತಮ್ಮೊಂದಿಗೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಹೊತ್ತೊಯ್ಯುವ ದೇಶವಿರೋಧಿ ಶಕ್ತಿಗಳ ಚಲನವಲನದ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಶುಕ್ರವಾರ ಸಂಜೆ ದಾದರ್‌ಕೂಟ್-ಅಲಂಗಂಜ್ ಕ್ರಾಸಿಂಗ್‌ನಲ್ಲಿ ಚೆಕ್‌ಪೋಸ್ಟ್ ಸ್ಥಾಪಿಸಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಮೂವರನ್ನು ಅಡ್ಡಗಟ್ಟಿ ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

"ಶೋಧ ಸಮಯದಲ್ಲಿ, ಪೊಲೀಸರು ಬಂಧಿತ ಶಂಕಿತ ಉಗ್ರರಿಂದ ಒಂದು ಪಿಸ್ತೂಲ್, ಎರಡು ಮ್ಯಾಗಜೀನ್ಗಳು ಮತ್ತು 13 ಲೈವ್ ರೌಂಡ್ಸ್ ಗಳನ್ನು ವಶಪಡಿಸಿಕೊಂಡಿದ್ದಾರೆ" ಎಂದು ವಕ್ತಾರರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್‌

ನಟ ದರ್ಶನ್‌ಗೆ ಮತ್ತೊಂದು ಶಾಕ್; ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ; ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆ

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್