ಸಿಬಿಐ (ಸಂಗ್ರಹ ಚಿತ್ರ) 
ದೇಶ

ಮನೀಶ್ ಸಿಸೋಡಿಯಾ ಮನವಿ ಸ್ವೀಕಾರ; ಹೊಸದಾಗಿ ಸಮನ್ಸ್ ಕಳುಹಿಸಲಿರುವ ಕೇಂದ್ರೀಯ ತನಿಖಾ ದಳ

ದೆಹಲಿ ಅಬಕಾರಿ ನೀತಿ ಹಗರಣದ ಇತ್ತೀಚಿನ ಬೆಳವಣಿಗೆಯಲ್ಲಿ, ತನಿಖೆಗೆ ಹಾಜರಾಗಲು ಹೆಚ್ಚಿನ ಸಮಯ ಕೋರಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿದ್ದ ಮನವಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಸ್ವೀಕರಿಸಿದೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಇತ್ತೀಚಿನ ಬೆಳವಣಿಗೆಯಲ್ಲಿ, ತನಿಖೆಗೆ ಹಾಜರಾಗಲು ಹೆಚ್ಚಿನ ಸಮಯ ಕೋರಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿದ್ದ ಮನವಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಸ್ವೀಕರಿಸಿದೆ.

ಇದಕ್ಕೂ ಮುನ್ನ ಸಿಸೋಡಿಯಾ ಸಿಬಿಐಗೆ ಪತ್ರ ಬರೆದು ಏಳು ದಿನಗಳ ಕಾಲಾವಕಾಶ ಕೋರಿದ್ದರು.

ಸಿಬಿಐ ಇದೀಗ ಸಿಸೋಡಿಯಾ ಅವರಿಗೆ ಹೊಸ ಸಮನ್ಸ್ ಜಾರಿ ಮಾಡಲಿದ್ದು, ತನಿಖೆಗೆ ಹಾಜರಾಗಲು ಹೊಸ ದಿನಾಂಕವನ್ನು ನಿಗದಿಪಡಿಸಲಿದೆ.

ತೆರೆಮರೆಯಲ್ಲಿ ಇರುವುದು ಬಿಜೆಪಿಯೇ ಎಂದು ಸಿಸೋಡಿಯಾ ಆರೋಪಿಸಿದ್ದಾರೆ. ತನಿಖೆಗೆ ಹಾಜರಾಗಲು ಸಮನ್ಸ್ ನೀಡಿದಾಗ ದೆಹಲಿ ಬಜೆಟ್‌ಗೆ ಅಂತಿಮ ಸ್ಪರ್ಶ ನೀಡುವ ಕಾರ್ಯದಲ್ಲಿ ತಾನು ನಿರತನಾಗಿದ್ದಾಗಿ ಅವರು ಆರೋಪಿಸಿದ್ದಾರೆ.

'ನಾನೂ ಹಣಕಾಸು ಸಚಿವ ಕೂಡ. ಹೀಗಾಗಿ, ನಾನು ದೆಹಲಿ ಬಜೆಟ್ ಅನ್ನು ಸಿದ್ಧಪಡಿಸಬೇಕು. ಅನುಮೋದನೆಗಾಗಿ ಕೇಂದ್ರಕ್ಕೆ ಕಳುಹಿಸಲಾಗುವುದು. ಅಭಿವೃದ್ಧಿ ಕೆಲಸಗಳನ್ನು ಮಾಡುವುದರಿಂದ ನಮ್ಮನನು ತಡೆಯಲು ಬಿಜೆಪಿಯವರು ಸಿಬಿಐ ಅನ್ನು ಬಳಸುತ್ತಿದ್ದಾರೆ. ನಾನು ಸಮಯ ಕೇಳಿದ್ದೇನೆ' ಎಂದು ಸಿಸೋಡಿಯಾ ಹೇಳಿದರು.

ಇದೀಗ ಸಿಬಿಐ ಅವರ ಮನವಿಯನ್ನು ಸ್ವೀಕರಿಸಿರುವುದರಿಂದ ಅವರಿಗೆ ಹೊಸದಾಗಿ ಸಮನ್ಸ್ ನೀಡಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!