ಮನೀಶ್ ಸಿಸೋಡಿಯಾ 
ದೇಶ

ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಬಿಐ ವಿಚಾರಣೆಯನ್ನು ಮುಂದೂಡುವಂತೆ ಮನೀಶ್ ಸಿಸೋಡಿಯಾ ಒತ್ತಾಯ

ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ದೆಹಲಿ ಬಜೆಟ್ ಅನ್ನು ಅಂತಿಮಗೊಳಿಸುವಲ್ಲಿ ನಿರತರಾಗಿರುವ ಕಾರಣ ಸಿಬಿಐ ತನ್ನ ವಿಚಾರಣೆಯನ್ನು ಫೆಬ್ರುವರಿ ಕೊನೆಯ ವಾರದವರೆಗೆ ಮುಂದೂಡುವಂತೆ ಭಾನುವಾರ ಒತ್ತಾಯಿಸಿದ್ದಾರೆ.

ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ದೆಹಲಿ ಬಜೆಟ್ ಅನ್ನು ಅಂತಿಮಗೊಳಿಸುವಲ್ಲಿ ನಿರತರಾಗಿರುವ ಕಾರಣ ಸಿಬಿಐ ತನ್ನ ವಿಚಾರಣೆಯನ್ನು ಫೆಬ್ರುವರಿ ಕೊನೆಯ ವಾರದವರೆಗೆ ಮುಂದೂಡುವಂತೆ ಭಾನುವಾರ ಒತ್ತಾಯಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಸಿದ ಸುಮಾರು ಮೂರು ತಿಂಗಳ ನಂತರ ಸಿಸೋಡಿಯಾ ಅವರನ್ನು ಭಾನುವಾರ ವಿಚಾರಣೆಗೆ ಕರೆಯಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಎಪಿ ನಾಯಕ ಮನೀಶ್ ಸಿಸೋಡಿಯಾ ಮತ್ತು ಇತರ ಶಂಕಿತರ ವಿರುದ್ಧ ತನಿಖೆ ಇನ್ನೂ ನಡೆಯುತ್ತಿರುವುದರಿಂದ ಸದ್ಯ ಚಾರ್ಜ್ ಶೀಟ್‌ನಲ್ಲಿ ಸಿಸೋಡಿಯಾ ಅವರನ್ನು ಆರೋಪಿ ಎಂದು ಹೆಸರಿಸಿಲ್ಲ. 

'ನಾನು ಸಿಬಿಐಗೆ ಪತ್ರ ಬರೆದಿದ್ದೇನೆ ಮತ್ತು ನಾನು ದೆಹಲಿಯ ಬಜೆಟ್ ಅನ್ನು ಅಂತಿಮಗೊಳಿಸುತ್ತಿದ್ದೇನೆ ಮತ್ತು ಇದು ನಿರ್ಣಾಯಕ ಸಮಯವಾಗಿದೆ. ಹೀಗಾಗಿ, ಕಳೆದ ವಾರ ಫೆಬ್ರುವರಿ ಕೊನೆಯ ವಾರದ ನಂತರ ವಿಚಾರಣೆಗೆ ಬರುತ್ತೇನೆ ಎಂದು ಹೇಳಿದ್ದೇನೆ' ಎಂದು ಮನೀಶ್ ಸಿಸೋಡಿಯಾ ಸುದ್ದಿಗಾರರಿಗೆ ತಿಳಿಸಿದರು.

'ಸಮಯಕ್ಕೆ ಸರಿಯಾಗಿ ಬಜೆಟ್ ಮಂಡಿಸುವುದು ಹಣಕಾಸು ಸಚಿವನಾಗಿ ನನ್ನ ಕರ್ತವ್ಯ ಮತ್ತು ಅದಕ್ಕಾಗಿ 24 ಗಂಟೆಯೂ ಶ್ರಮಿಸುತ್ತಿದ್ದೇನೆ. ಫೆಬ್ರುವರಿ ಕೊನೆಯ ವಾರದ ನಂತರ ಬಂದು ಅವರ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ಅವಕಾಶ ನೀಡುವಂತೆ ಸಿಬಿಐಗೆ ಮನವಿ ಮಾಡಿದ್ದೇನೆ' ಎಂದು ಅವರು ತಿಳಿಸಿದರು.

ಆಮ್ ಆದ್ಮಿ ಪಕ್ಷದ ಸರ್ಕಾರದಲ್ಲಿ ಉಪಮುಖ್ಯಮಂತ್ರಿ, ಅಬಕಾರಿ ಇಲಾಖೆಯ ಉಸ್ತುವಾರಿಯನ್ನೂ ವಹಿಸಿಕೊಂಡಿದ್ದ ಅವರನ್ನು ಈ ಹಿಂದೆ ಕಳೆದ ವರ್ಷ ಅಕ್ಟೋಬರ್ 17 ರಂದು ಪ್ರಶ್ನಿಸಲಾಗಿತ್ತು ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆ ಮತ್ತು ಬ್ಯಾಂಕ್ ಲಾಕರ್‌ಗಳನ್ನು ಸಹ ಶೋಧಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT