ಸಾಂದರ್ಭಿಕ ಚಿತ್ರ 
ದೇಶ

'ನಾನು ಗೋಮಾಂಸ ತಿನ್ನುತ್ತೇನೆ ಮತ್ತು ಬಿಜೆಪಿಯಲ್ಲೇ ಇದ್ದೇನೆ': ಮೇಘಾಲಯ ಬಿಜೆಪಿ ಅಧ್ಯಕ್ಷ

ನಾನು ಗೌಮಾಂಸ ತಿನ್ನುತ್ತೇನೆ ಮತ್ತು ಬಿಜೆಪಿಯಲ್ಲೇ ಇದ್ದೇನೆ. ಗೋಮಾಂಸ ತಿನ್ನುವುದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಮೇಘಾಲಯ ಬಿಜೆಪಿ ಅಧ್ಯಕ್ಷ ಅರ್ನೆಸ್ಟ್ ಮಾವ್ರಿ ಅವರು ಹೇಳಿದ್ದಾರೆ.

ಗುವಾಹಟಿ: ನಾನು ಗೌಮಾಂಸ ತಿನ್ನುತ್ತೇನೆ ಮತ್ತು ಬಿಜೆಪಿಯಲ್ಲೇ ಇದ್ದೇನೆ. ಗೋಮಾಂಸ ತಿನ್ನುವುದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಮೇಘಾಲಯ ಬಿಜೆಪಿ ಅಧ್ಯಕ್ಷ ಅರ್ನೆಸ್ಟ್ ಮಾವ್ರಿ ಅವರು ಹೇಳಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಒಂಬತ್ತು ವರ್ಷಗಳಾಗಿದ್ದು, ದೇಶದಲ್ಲಿ ಯಾವುದೇ ಚರ್ಚ್ ದಾಳಿಗೆ ಒಳಗಾಗಿರುವುದನ್ನು ನಾವು ನೋಡಿಲ್ಲ ಎಂದು ಮೇಘಾಲಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಐಎಎನ್ಎಸ್ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ಗೋಮಾಂಸ ಸೇವನೆಗೂ ಯಾವುದೇ ನಿರ್ಬಂಧ ವಿಧಿಸಿಲ್ಲ. ನಾನು ಗೋಮಾಂಸ ತಿನ್ನುತ್ತೇನೆ. ಮತ್ತು ಬಿಜೆಪಿಯಲ್ಲೇ ಇದ್ದೇನೆ. ಇದರಿಂದ ಯಾವುದೇ ಸಮಸ್ಯೆಯಾಗಿಲ್ಲ ಎಂದು ಮೇಘಾಲಯ ಬಿಜೆಪಿ ಅಧ್ಯಕ್ಷರು ಹೇಳಿದ್ದಾರೆ.

ಶೇಕಡ 90ರಷ್ಟು ಕ್ರೈಸ್ತರು ಇರುವ ಮೇಘಾಲಯದಂತಹ ರಾಜ್ಯದಲ್ಲಿ ಜನರು ಗೋಮಾಂಸ ನಿಷೇಧ, ಸಿಎಎ ಮತ್ತು ಇತರ ವಿಷಯಗಳಲ್ಲಿ ಬಿಜೆಪಿಯ ಕಠಿಣ ನಿಲುವುಗಳನ್ನು ಒಪ್ಪಿಕೊಳ್ಳಲು ಸಿದ್ಧರಾಗಿದ್ದಾರೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಮಾವ್ರಿ, ಮೇಘಾಲಯದ ಜನತೆ ಈ ಬಾರಿ ಬಿಜೆಪಿ ಜೊತೆಗಿದ್ದಾರೆ. ಅದನ್ನು ಮಾರ್ಚ್ 2 ರಂದು ಎಲ್ಲರೂ ನೋಡಲಿದ್ದಾರೆ’ ಎಂದು ಹೇಳಿದ್ದಾರೆ.

ಮೇಘಾಲಯ ವಿಧಾನಸಭೆಗೆ ಫೆಬ್ರುವರಿ 27ರಂದು ಮತದಾನ ನಡೆಯಲಿದೆ. ಮಾರ್ಚ್‌ 2ರಂದು ಫಲಿತಾಂಶ ಹೊರ ಬೀಳಲಿದೆ. ರಾಜ್ಯದಲ್ಲಿ ಬಿಜೆಪಿಯು ಎನ್‌ಪಿಪಿಯೊಂದಿಗೆ ಮೈತ್ರಿಯನ್ನು ಕಡಿದುಕೊಂಡಿದ್ದು, 60 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT