ದೇಶ

ದೆಹಲಿ ಅಬಕಾರಿ ನೀತಿ ಪ್ರಕರಣ: ಫೆಬ್ರುವರಿ 26 ರಂದು ಸಿಬಿಐ ತನ್ನನ್ನು ವಿಚಾರಣೆಗೆ ಕರೆದಿದೆ- ಮನೀಶ್ ಸಿಸೋಡಿಯಾ

Ramyashree GN

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರುವರಿ 26 ರಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಕರೆ ಬಂದಿದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೋಮವಾರ ಹೇಳಿದ್ದಾರೆ.

ದೆಹಲಿ ಬಜೆಟ್ ಅನ್ನು ಅಂತಿಮಗೊಳಿಸುವಲ್ಲಿ ನಿರತರಾಗಿರುವ ಕಾರಣ ಸಿಬಿಐ ತನ್ನ ವಿಚಾರಣೆಯನ್ನು ಫೆಬ್ರುವರಿ ಕೊನೆಯ ವಾರದವರೆಗೆ ಮುಂದೂಡುವಂತೆ ಭಾನುವಾರ ಕೋರಿದ್ದರು. 

ಫೆಬ್ರವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ಸಿಸೋಡಿಯಾ ಅವರಿಗೆ ಸಂಸ್ಥೆ ಹೇಳಿತ್ತು. 

ವಿಚಾರಣೆಯನ್ನು ಮುಂದೂಡಲು ಕೋರಿದ್ದ ಸಿಸೋಡಿಯಾ ಅವರ ಅರ್ಜಿಯನ್ನು ಸಿಬಿಐ ಸ್ವೀಕರಿಸಿದೆ ಮತ್ತು ಶೀಘ್ರದಲ್ಲೇ ಹೊಸ ದಿನಾಂಕವನ್ನು ನೀಡುವುದಾಗಿ ಹೇಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕ ಸಿಸೋಡಿಯಾ ಅವರು, ಫೆಬ್ರುವರಿ 26 ರಂದು ವಿಚಾರಣೆಗೆ ಕರೆದಿದ್ದಾರೆ ಮತ್ತು ತನಿಖಾ ಸಂಸ್ಥೆಯ ಮುಂದೆ ಹಾಜರಾಗಲಿದ್ದೇನೆ ಎಂದು ಹೇಳಿದರು.

SCROLL FOR NEXT