ಸಾಂದರ್ಭಿಕ ಚಿತ್ರ 
ದೇಶ

ರಾಜಧಾನಿ ದೆಹಲಿಯಲ್ಲಿ ಮತ್ತೊಂದು 'ಲಿವ್-ಇನ್ ಹತ್ಯೆ'; ಬೆಂಕಿ ಹಚ್ಚಿ ಕೊಲೆಗೈದ ಪ್ರಿಯಕರ!

ಶ್ರದ್ಧಾವಾಕರ್ ಹತ್ಯೆ ಪ್ರಕರಣ ಹಸಿರಾಗಿರುವಂತೆಯೇ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೊಂದು 'ಲಿವ್-ಇನ್ ಹತ್ಯೆ' ಪ್ರಕರಣ ಬೆಳಕಿಗೆ ಬಂದಿದ್ದು, ತನ್ನ ಪ್ರಿಯತಮೆಯನ್ನು ಪ್ರಿಯಕರ ಬೆಂಕಿ ಹಚ್ಚಿ ಕೊಲೆಗೈದಿದ್ದಾನೆ.

ನವದೆಹಲಿ: ಶ್ರದ್ಧಾವಾಕರ್ ಹತ್ಯೆ ಪ್ರಕರಣ ಹಸಿರಾಗಿರುವಂತೆಯೇ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೊಂದು 'ಲಿವ್-ಇನ್ ಹತ್ಯೆ' ಪ್ರಕರಣ ಬೆಳಕಿಗೆ ಬಂದಿದ್ದು, ತನ್ನ ಪ್ರಿಯತಮೆಯನ್ನು ಪ್ರಿಯಕರ ಬೆಂಕಿ ಹಚ್ಚಿ ಕೊಲೆಗೈದಿದ್ದಾನೆ.

ವಾಯವ್ಯ ದೆಹಲಿಯ ಅಮನ್ ವಿಹಾರ್‌ನಲ್ಲಿ ಈ ಘಟನೆ ನಡೆದಿದ್ದು, 28 ವರ್ಷದ ವಿವಾಹಿತ ಮಹಿಳೆಯನ್ನು ಆಕೆಯ ಪ್ರಿಯಕರ ಬೆಂಕಿ ಹಚ್ಚಿ ಕೊಂದು ಹಾಕಿದ್ದಾನೆ. ಫೆಬ್ರವರಿ 11 ರಂದು, ಸುಟ್ಟ ಗಾಯಗಳೊಂದಿಗೆ ಮಹಿಳೆಯನ್ನು ಎಸ್‌ಜಿಎಂ ಆಸ್ಪತ್ರೆಗೆ ದಾಖಲಿಸಿದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ಪೊಲೀಸರು ಆಸ್ಪತ್ರೆಗೆ ತಲುಪಿದಾಗ, ಮಹಿಳೆ ತನ್ನ ಹೇಳಿಕೆಯನ್ನು ದಾಖಲಿಸಲು ವಿಫಲರಾಗಿದ್ದರು. ಬಳಿಕೆ ಆಕೆಯನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಮತ್ತು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಏಮ್ಸ್ ಟ್ರಾಮಾ ಸೆಂಟರ್‌ಗೆ ಸ್ಥಳಾಂತರಿಸಲಾಯಿತು. ಆದರೆ ಬಳಿಕ ಆಕೆ ಚಿಕಿತ್ಸೆ ಫಲಿಸದೇ ಆಕೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸ್ ಮೂಲಗಳ ಪ್ರಕಾರ ಮೃತ ಮಹಿಳೆಯನ್ನು ವಾಯುವ್ಯ ದೆಹಲಿಯ ಬಲ್ಬೀರ್ ವಿಹಾರ್ ನಿವಾಸಿ ಎಂದು ಗುರುತಿಸಲಾಗಿದ್ದು, ಆಕೆ ಪಾದರಕ್ಷೆ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ. ಮಹಿಳೆ ತನ್ನ ಪತಿಯನ್ನು ತೊರೆದು ಕಳೆದ ಆರು ವರ್ಷಗಳಿಂದ ಆರೋಪಿ ಮೋಹಿತ್  ಎಂಬಾತನನ್ನು ಪ್ರೀತಿಸಿ ಆತನೊಂದಿಗೆ ಲಿವ್ ಇನ್ ಸಂಬಂಧದದಲ್ಲಿದ್ದಳು. ಅಲ್ಲದೆ ಆರೋಪಿಯೊಂದಿಗೆ ವಾಸಿಸುತ್ತಿದ್ದಳು. ಮಹಿಳೆಗೆ ತನ್ಮ ಮೊದಲ ಮದುವೆಯಿಂದ ಒಂದು ಮತ್ತು ಮೋಹಿತ್ ನಿಂದ ಒಂದು ಮಗು ಅಂದರೆ ಒಟ್ಟು 2 ಮಕ್ಕಳು ಇದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡ್ರಗ್ಸ್ ವಿವಾದ ಕೊಲೆಯಲ್ಲಿ ಅಂತ್ಯ
ಪೊಲೀಸ್ ಮೂಲಗಳ ಪ್ರಕಾರ ಮೃತ ಮಹಿಳೆ ಮತ್ತು ಆರೋಪಿ ಮೋಹಿತ್ ನಡುವೆ ಡ್ರಗ್ಸ್ ವಿಚಾರಕ್ಕೆ ಗಲಾಟೆಯಾಗಿದ್ದು, ಈ ಗಲಾಟೆ ವಿಕೋಪಕ್ಕೆ ತಿರುಗೆ ಮೋಹಿತ್ ಆಕೆಯನ್ನು ಸುಟ್ಟು ಕೊಂದಿದ್ದಾನೆ. ಫೆಬ್ರವರಿ 10 ರಂದು ರಾತ್ರಿ ಮೋಹಿತ್ ತನ್ನ ಸ್ನೇಹಿತರೊಂದಿಗೆ ಸೇರಿ ಡ್ರಗ್ಸ್ ಸೇವಿಸುತ್ತಿರುವುದನ್ನು ಕಂಡು ಮಹಿಳೆ ಜಗಳ ಮಾಡಿದ್ದಳು. ಈ ವೇಳೆ ಜಗಳ ತಾರಕಕ್ಕೇರಿ ಆರೋಪಿ ಮೋಹಿತ್ ಆಕೆಯ ಮೇಲೆ 'ಟರ್ಪಂಟೈನ್ ಆಯಿಲ್' ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಸ್ತುತ ಮೋಹಿತ್‌ನನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಅಂತೆಯೇ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್