ಏಕನಾಥ್ ಶಿಂಧೆ 
ದೇಶ

ಶಿವಸೇನೆ ಮುಖ್ಯಸ್ಥರಾಗಿ ಏಕನಾಥ್ ಶಿಂಧೆ ಮುಂದುವರಿಕೆ, ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ

ವಾಣಿಜ್ಯ ನಗರಿ ಮುಂಬೈನಲ್ಲಿ ಮಂಗಳವಾರ ಸಂಜೆ ನಡೆದ ಶಿವಸೇನೆಯ ಮೊದಲ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಪಕ್ಷದ ಮುಖ್ಯಸ್ಥರಾಗಿ ಮುಂದುವರೆಸಲು ತೀರ್ಮಾನಿಸಲಾಯಿತು

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಮಂಗಳವಾರ ಸಂಜೆ ನಡೆದ ಶಿವಸೇನೆಯ ಮೊದಲ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಪಕ್ಷದ ಮುಖ್ಯಸ್ಥರಾಗಿ ಮುಂದುವರೆಸಲು ತೀರ್ಮಾನಿಸಲಾಯಿತು

ಸಭೆಯಲ್ಲಿ ಅಂಗೀಕರಿಸಿದ ನಿರ್ಣಯಗಳ ಕುರಿತು ರಾಜ್ಯ ಕೈಗಾರಿಕಾ ಸಚಿವ ಉದಯ್ ಸಾಮಂತ್ ಘೋಷಿಸಿದರು. ಭಾರತೀಯ ಚುನಾವಣಾ ಆಯೋಗ ಕಳೆದ ವಾರ ಶಿಂಧೆ ಬಣವನ್ನು ನಿಜವಾದ ಶಿವಸೇನೆ ಎಂದು ಗುರುತಿಸಿತು ಮತ್ತು ಪಕ್ಷದ ಚುನಾವಣಾ ಚಿಹ್ನೆಯಾದ ಬಿಲ್ಲು ಮತ್ತು ಬಾಣವನ್ನು ಅವರಿಗೆ ನೀಡಿತು. 

ಶಿಂಧೆ ಮತ್ತು ಮಾಜಿ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಪ್ರತಿಸ್ಪರ್ಧಿ ಬಣಗಳು ಶಿವಸೇನೆಯ ನಿಯಂತ್ರಣಕ್ಕಾಗಿ ಕಾನೂನು ಹೋರಾಟದಲ್ಲಿ ತೊಡಗಿವೆ. ಶಿವಸೇನೆಯ ಮುಖ್ಯ ನಾಯಕ, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ಸಭೆ ನಡೆದಿದ್ದು, ಶಿಸ್ತು ಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಸಾಮಂತ್ ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ಬೇಡಿಕೆ ಸೇರಿದಂತೆ ಮತ್ತಿತರ ನಿರ್ಣಯಗಳನ್ನು ಅಂಗೀಕರಿಸಲಾಯಿತು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!