ಉದ್ಧವ್ ಠಾಕ್ರೆ 
ದೇಶ

ಶಿವಸೇನೆ ಚಿಹ್ನೆ ವಿವಾದ: ಇಸಿ ನಿರ್ಧಾರದ ವಿರುದ್ಧ ಉದ್ಧವ್‌ ಠಾಕ್ರೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ಶಿವಸೇನೆಯ ಮೂಲ ಚಿಹ್ನೆಯಾದ 'ಬಿಲ್ಲು ಬಾಣ'ವನ್ನು ನೀಡಿದ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಉದ್ಧವ್ ಠಾಕ್ರೆ ಬಣ ಸಲ್ಲಿಸಿದ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

ನವದೆಹಲಿ: ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ಶಿವಸೇನೆಯ ಮೂಲ ಚಿಹ್ನೆಯಾದ 'ಬಿಲ್ಲು ಬಾಣ'ವನ್ನು ನೀಡಿದ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಉದ್ಧವ್ ಠಾಕ್ರೆ ಬಣ ಸಲ್ಲಿಸಿದ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

ಠಾಕ್ರೆ ಬಣದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಮಂಗಳವಾರ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಪಿ ಎಸ್ ನರಸಿಂಹ ಅವರ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿದರು.

ಚುನಾವಣಾ ಆಯೋಗದ ಆದೇಶವನ್ನು ತಡೆಹಿಡಿಯದಿದ್ದರೆ, ಅವರು ಚಿಹ್ನೆ ಮತ್ತು ಬ್ಯಾಂಕ್ ಖಾತೆಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಾರೆ. ದಯವಿಟ್ಟು ಅದನ್ನು ಸಂವಿಧಾನ ಪೀಠದ ಮುಂದೆ ನಾಳೆ ಪಟ್ಟಿ ಮಾಡಿ ಎಂದು ಸಿಬಲ್ ಮನವಿ ಮಾಡಿದರು. ಮನವಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ.

ಕಳೆದ ಶುಕ್ರವಾರ ಚುನಾವಣಾ ಆಯೋಗವು ಏಕನಾಥ್ ಶಿಂಧೆ ನೇತೃತ್ವದ ಬಣ ನಿಜವಾದ ಶಿವಸೇನೆ ಎಂದು ಘೋಷಿಸಿ, ಅದಕ್ಕೆ "ಬಿಲ್ಲು ಮತ್ತು ಬಾಣ" ಚಿಹ್ನೆಯನ್ನು ನೀಡಿ ಆದೇಶಿಸಿತ್ತು.

ಚುನಾವಣಾ ಆಯೋಗದ ಈ ಆದೇಶ 'ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ' ಎಂದಿದ್ದ ಉದ್ಧವ್ ಠಾಕ್ರೆ ಅವರು, ಇಸಿ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ