ಜಮ್ಮು-ಕಾಶ್ಮೀರ 
ದೇಶ

ಇದೇ ಮೊದಲ ಬಾರಿಗೆ ಏಪ್ರಿಲ್ 1 ರಿಂದ ಜಮ್ಮು-ಕಾಶ್ಮೀರದಲ್ಲಿ ಆಸ್ತಿ ತೆರಿಗೆ ಜಾರಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದುಗೊಳಿಸಿದ 3 ವರ್ಷಗಳ ಬಳಿಕ ಏ.1 ರಿಂದ ಆಸ್ತಿ ತೆರಿಗೆ ವಿಧಿಸುವುದು ಕೇಂದ್ರಾಡಳಿತ ಪ್ರದೇಶದಲ್ಲಿ ಜಾರಿಗೆ ಬರುತ್ತಿದೆ. 

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದುಗೊಳಿಸಿದ 3 ವರ್ಷಗಳ ಬಳಿಕ ಏ.1 ರಿಂದ ಆಸ್ತಿ ತೆರಿಗೆ ವಿಧಿಸುವುದು ಕೇಂದ್ರಾಡಳಿತ ಪ್ರದೇಶದಲ್ಲಿ ಜಾರಿಗೆ ಬರುತ್ತಿದೆ. 

ಆಸ್ತಿ ತೆರಿಗೆ ವಿಧಿಸುವ ನಿರ್ಧಾರವನ್ನು ಜಮ್ಮು-ಕಾಶ್ಮೀರ ಆಡಳಿತ ತೆಗೆದುಕೊಂಡಿದೆ. ವಸತಿ ಹಾಗೂ ನಗರಾಭಿವೃದ್ಧಿ ಇಲಾಖೆ ಇಂದು ಆಸ್ತಿ ತೆರಿಗೆ ವಿಧಿಸುವ ಬಗ್ಗೆ ಘೋಷಿಸಿದ್ದು, ಕೇಂದ್ರಾಡಳಿತ ಪ್ರದೇಶದ ಪುರಸಭೆಗಳು ಮತ್ತು ಮುನ್ಸಿಪಲ್ ಕೌನ್ಸಿಲ್ಗಳಲ್ಲಿ ಜಾರಿಗೆ ಬರಲಿದೆ. 

ವಸತಿ ಹಾಗೂ ವಸತಿಯೇತರ ಆಸ್ತಿಗಳು ಆಸ್ತಿ ತೆರಿಗೆ ವ್ಯಾಪ್ತಿಗೆ ಬರುತ್ತಿದೆ. ಈ ಹಿಂದೆ ವಸತಿ ಆಸ್ತಿಗಳಿಗೆ ಸರ್ಕಾರ ವಿನಾಯ್ತಿ ನೀಡಬಹುದು ಎಂದು ನಿರೀಕ್ಷಿಸಲಾಗಿತ್ತು. ವಸತಿ ಆಸ್ತಿಯೊಂದಕ್ಕೆ ಆಸ್ತಿ ತೆರಿಗೆಯನ್ನು, ತೆರಿಗೆ ವಿಧಿಸಬಹುದಾದ ವಾರ್ಷಿಕ ಮೌಲ್ಯ (ಟಿಎವಿ) ಯ ಶೇ.5 ರಷ್ಟು ವಿಧಿಸಲಿದ್ದು, ವಸತಿಯಲ್ಲದ್ದಕ್ಕೆ ಶೇ.6 ರಷ್ಟು ತೆರಿಗೆ ವಿಧಿಸಲಾಗುತ್ತದೆ.

ಪುರಸಭೆಯ ಪ್ರಕಾರದ ಅಂಶ + ಭೂ ಮೌಲ್ಯದ ಅಂಶ + ವಿಸ್ತೀರ್ಣದ ಅಂಶ + ಮಹಡಿ ಅಂಶ + ಬಳಕೆಯ ಪ್ರಕಾರ + ನಿರ್ಮಾಣದ ವಿಧದ ಅಂಶ + ಕಟ್ಟಡ ನಿರ್ಮಿಸಿದ ವರ್ಷ+  ಸ್ಲ್ಯಾಬ್ ಅಂಶ + ಇತರ ಬಳಕೆಯ ಪ್ರಕಾರಗಳ ಆಧಾರದ ಮೇಲೆ ಟಿಎವಿಯನ್ನು ಲೆಕ್ಕಹಾಕಲಾಗುತ್ತದೆ,” ಎಂದು ಸರ್ಕಾರದ ಅಧಿಸೂಚನೆ ಹೇಳಿದೆ. 

ಖಾಲಿ ಭೂಮಿ, ರಚನೆ/ಕಟ್ಟಡಕ್ಕೆ ಪೂರಕವಾಗಿಲ್ಲದ ಆಸ್ತಿಗಳಿಗೆ ಸರ್ಕಾರ ವಿನಾಯ್ತಿ ನೀಡಿದ್ದು, ಪ್ರದೇಶದಲ್ಲಿ ಮಾಸ್ಟರ್ ಪ್ಲಾನ್ ಜಾರಿಯಲ್ಲಿದ್ದರೆ, ಅಂತಹ ಖಾಲಿ ಭೂಮಿಯಲ್ಲಿ ಯಾವುದೇ ನಿರ್ಮಾಣ/ಅಭಿವೃದ್ಧಿಯನ್ನು ಅನುಮತಿಸಲಾಗುವುದಿಲ್ಲ.

ದೇವಸ್ಥಾನಗಳು, ಮಸೀದಿಗಳು, ಗುರುದ್ವಾರಗಳು, ಚರ್ಚ್‌ಗಳು, ಜಿಯಾರಾತ್‌ಗಳು ಇತ್ಯಾದಿಗಳನ್ನು ಒಳಗೊಂಡಂತೆ ಪುರಸಭೆ ಮತ್ತು ಪೂಜಾ ಸ್ಥಳಗಳು ಮತ್ತು ಶವಸಂಸ್ಕಾರ ಮತ್ತು ಸಮಾಧಿ ಸ್ಥಳಗಳನ್ನು ಆಸ್ತಿ ತೆರಿಗೆಯಿಂದ ವಿನಾಯಿತಿ ನೀಡಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT