ನವ ವಧು-ವರ ಸಾವು 
ದೇಶ

ಆರತಕ್ಷತೆಗೂ ಮೊದಲೇ ಕೋಣೆಗೆ ಹೋಗಿದ್ದ ನವದಂಪತಿ ಶವವಾಗಿ ಪತ್ತೆ!

ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ ಸಂತೋಷಿ ನಗರದಲ್ಲಿ ಆರತಕ್ಷತೆಯ ದಿನವೇ ವಧು-ವರರ ಮೃತದೇಹ ಕೋಣೆಯಲ್ಲಿ ಪತ್ತೆಯಾಗಿದೆ.

ರಾಯ್‌ಪುರ: ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ ಸಂತೋಷಿ ನಗರದಲ್ಲಿ ಆರತಕ್ಷತೆಯ ದಿನವೇ ವಧು-ವರರ ಮೃತದೇಹ ಕೋಣೆಯಲ್ಲಿ ಪತ್ತೆಯಾಗಿದೆ. 

ಈ ಜೋಡಿ ಕೊಲೆ ಪ್ರಕರಣದಲ್ಲಿ ವರನು ಮೊದಲು ವಧುವಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಆದರೆ, ಕೊಲೆಗೆ ಕಾರಣಗಳು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ಈ ಕೊಲೆಯ ಹಿಂದೆ ತ್ರಿಕೋನ ಪ್ರೇಮವಿದೆ ಎಂದು ಪೊಲೀಸರು ಶಂಕಿಸಿದ್ದಾರೆ. 

ಆದರೆ, ವಿಧಿವಿಜ್ಞಾನ ತಂಡ ಇಂದು ಸ್ಥಳ ಪರಿಶೀಲನೆ ನಡೆಸಲಿದೆ. ಈ ವೇಳೆ ವಧುವಿಗೆ ಮೇಕಪ್ ಮಾಡಿದ ಬ್ಯೂಟಿಷಿಯನ್‌ನನ್ನೂ ವಿಚಾರಣೆಗೊಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ನೀಡಿದ ರಾಯ್‌ಪುರ ಎಸ್‌ಎಸ್‌ಪಿ ಪ್ರಶಾಂತ್ ಅಗರ್ವಾಲ್, ತಿಕ್ರಪಾರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದರಲ್ಲಿ ಅಸ್ಲಂ ಮತ್ತು ಕೈಕ್ಷನ್ ಬಾನೊ ಫೆಬ್ರವರಿ 19ರಂದು ವಿವಾಹವಾಗಿದ್ದು ಫೆಬ್ರವರಿ 21ರಂದು ಆರತಕ್ಷತೆ ಇತ್ತು. ಇಬ್ಬರೂ ಆರತಕ್ಷತೆಗೆ ತಯಾರಾಗುತ್ತಿದ್ದರು. ಇಬ್ಬರೂ ಒಂದೇ ಕೋಣೆಯಲ್ಲಿದ್ದರು. ಕೊಠಡಿ ಒಳಗಿನಿಂದ ಬೀಗ ಹಾಕಿತ್ತು. 

ಇದೇ ವೇಳೆ ವಧು-ವರರ ನಡುವೆ ಯಾವುದೋ ವಿಚಾರಕ್ಕೆ ಜಗಳ ನಡೆದಿದೆ. ವರನು ಮೊದಲು ವಧುವನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಲ್ಲಿ ಇಬ್ಬರೂ ಸಾವನ್ನಪ್ಪಿದ್ದಾರೆ. ಕೊಲೆಯ ತನಿಖೆ ನಡೆಯುತ್ತಿದೆ. ಘಟನೆಗೆ ಕಾರಣಗಳು ನಂತರವೇ ತಿಳಿಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT