ದೇಶ

ಸಿಎಂ ಏಕನಾಥ್ ಶಿಂಧೆ ಪುತ್ರನಿಂದ ಸುಪಾರಿ ಆರೋಪ, ರಾವತ್ ವಿರುದ್ಧ ಎಫ್ ಐಆರ್

Nagaraja AB

ಥಾಣೆ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಅವರಿಂದ ಜೀವ ಬೆದರಿಕೆ ಇದೆ ಎಂಬ ಹೇಳಿಕೆಗಾಗಿ ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆ ಮುಖಂಡ ಸಂಜಯ್ ರಾವತ್ ವಿರುದ್ಧದ ಮಾನನಷ್ಟ ಮೊಕದ್ದಮೆಗಾಗಿ ಥಾಣೆ ನಗರ ಪೊಲೀಸರು ಬುಧವಾರ ತಡರಾತ್ರಿ ಎಫ್ ಐಆರ್ ದಾಖಲಿಸಿದ್ದಾರೆ.

 ಈ ಸಂಬಂಧ  ಕಪುರಬಾವಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153 (ಎ) (ವಿವಿಧ ಗುಂಪುಗಳು, ಧರ್ಮಗಳು ಇತ್ಯಾದಿಗಳ ನಡುವೆ ಅಸಂಗತತೆ ಉತ್ತೇಜಿಸುವುದು), 500 (ಮಾನನಷ್ಟ) ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾಜಿ ಮೇಯರ್ ಮೀನಾಕ್ಷಿ ಶಿಂಧೆ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.  ಲೋಕಸಭಾ ಸದಸ್ಯ ಶ್ರೀಕಾಂತ್ ಶಿಂಧೆ ನನ್ನನ್ನು ಕೊಲ್ಲಲು  ಥಾಣೆ ಮೂಲದ ಕ್ರಿಮಿನಲ್ ರಾಜಾ ಠಾಕೂರ್‌ಗೆ ಸುಪಾರಿ'ನೀಡಿದ್ದಾರೆ ಎಂದು ಮುಂಬೈ ಪೊಲೀಸ್ ಕಮಿಷನರ್‌ಗೆ ಬರೆದ ಪತ್ರದಲ್ಲಿ ರಾವತ್ ಹೇಳಿದ್ದಾರೆ.

SCROLL FOR NEXT