ದೇಶ

ಪವನ್ ಖೇರಾ ಬಂಧನ: ದೇಶದ ಪರಿಸ್ಥಿತಿ "ತುರ್ತು ಪರಿಸ್ಥಿತಿಗಿಂತ ಕೆಟ್ಟದಾಗಿದೆ; ರಾಜಸ್ಥಾನ ಸಿಎಂ

Lingaraj Badiger

ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡಿದ ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ದೇಶದ ಪರಿಸ್ಥಿತಿ "ತುರ್ತು ಪರಿಸ್ಥಿತಿಗಿಂತ ಕೆಟ್ಟದಾಗಿದೆ" ಎಂದು ಗುರುವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸದಿದ್ದರೂ ದೇಶದಲ್ಲಿ ತುರ್ತು ಪರಿಸ್ಥಿತಿಯಂತಹ ಪರಿಸ್ಥಿತಿ ಇದೆ ಎಂದು ರಾಜಸ್ಥಾನ ಸಿಎಂ ಹೇಳಿದ್ದಾರೆ.

“ಇಂದು ದೇಶದ ಪರಿಸ್ಥಿತಿಯು ತುರ್ತು ಪರಿಸ್ಥಿತಿಗಿಂತ ಕೆಟ್ಟದಾಗಿದೆ. ತುರ್ತು ಪರಿಸ್ಥಿತಿ ಘೋಷಿಸದೆ ದೇಶದಲ್ಲಿ ತುರ್ತು ಪರಿಸ್ಥಿತಿಯಂತಹ ಪರಿಸ್ಥಿತಿ ಇದೆ. ಖೇರಾ ಬಂಧನವು ಪ್ರಪಂಚದಾದ್ಯಂತ ನಮ್ಮ ದೇಶವನ್ನು ದೂಷಿಸುವಂತೆ ಮಾಡಿದೆ. ಇದಕ್ಕಿಂತ ದುರದೃಷ್ಟಕರ ಮತ್ತೊಂದಿಲ್ಲ. ಪ್ರಜಾಪ್ರಭುತ್ವ ಅಪಾಯದಲ್ಲಿದೆ ಮತ್ತು ಸಂವಿಧಾನವನ್ನು ನಾಶ ಮಾಡಲಾಗುತ್ತಿದೆ ” ಎಂದು ವಾಗ್ದಾಳಿ ನಡೆಸಿದರು.

ಇಂದು ಬೆಳಗ್ಗೆ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ರಾಷ್ಟ್ರ ರಾಜಧಾನಿಯಲ್ಲಿ ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.

"ಹೆಸರು ಮಾತ್ರ ದಾಮೋದರದಾಸ್ ಮೋದಿ. ಆದರೆ ಅವರು ಮಾಡುವ ಕೆಲಸಗಳು ಮಾತ್ರ ಗೌತಮದಾಸ್ ಅವರದ್ದು" ಎಂದು ಖೇರಾ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

SCROLL FOR NEXT