ಪವನ್ ಖೇರಾ 
ದೇಶ

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಪವನ್ ಖೇರಾಗೆ ದೆಹಲಿ ಕೋರ್ಟ್ ನಿಂದ ಮಧ್ಯಂತರ ಜಾಮೀನು

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಅಸ್ಸಾಂ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಫೆಬ್ರವರಿ 28ರವರೆಗೆ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಅಸ್ಸಾಂ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಫೆಬ್ರವರಿ 28ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
  
ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅರ್ಚನಾ ಬೇನಿವಾಲ್ ಅವರು ಖೇರಾ ಅವರಿಗೆ 30,000 ರೂಪಾಯಿಗಳ ಬಾಂಡ್ ಮತ್ತು ಅದೇ ಮೊತ್ತದ ಒಂದು ಶ್ಯೂರಿಟಿ ಮೇಲೆ ಮಧ್ಯಂತರ ಜಾಮೀನು ನೀಡಿದ್ದಾರೆ.

ಖೇರಾ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ನೀಡಿದ ಆದೇಶದ ಪ್ರತಿಯನ್ನು ಸ್ವೀಕರಿಸಿದ ನಂತರ ಮ್ಯಾಜಿಸ್ಟ್ರೇಟ್ ಅರ್ಚನಾ ಅವರು ಸಂಜೆ 6.10 ರ ಸುಮಾರಿಗೆ ಈ ಆದೇಶ ನೀಡಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ, ಅಸ್ಸಾಂನಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಖೇರಾ ಅವರಿಗೆ ಫೆಬ್ರವರಿ 28 ರವರೆಗೆ ಮಧ್ಯಂತರ ಜಾಮೀನು ನೀಡುವಂತೆ ಆದೇಶ ನೀಡಿತ್ತು.

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಖೇರಾ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ದೆಹಲಿ-ರಾಯಪುರ ವಿಮಾನದಿಂದ ಕೆಳಗಿಳಿದ ಬಳಿಕ ಗುರುವಾರ ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. ಬಳಿಕ ಪವನ್ ಖೇರಾ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು.

"ಹೆಸರು ಮಾತ್ರ ದಾಮೋದರದಾಸ್ ಮೋದಿ. ಆದರೆ ಅವರು ಮಾಡುವ ಕೆಲಸಗಳು ಮಾತ್ರ ಗೌತಮದಾಸ್ ಅವರದ್ದು" ಎಂದು ಖೇರಾ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT