ದೇಶ

ಪವನ್ ಖೇರಾ ಬಂಧನ ಹಿಟ್ಲರ್‌ಶಾಹಿ ಎಂದ ಮಲ್ಲಿಕಾರ್ಜುನ ಖರ್ಗೆ

Lingaraj Badiger

ನವದೆಹಲಿ: ದೆಹಲಿಯಲ್ಲಿ ಪಕ್ಷದ ನಾಯಕ ಪವನ್ ಖೇರಾ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ನರೇಂದ್ರ ಮೋದಿ ಸರ್ಕಾರ "ಭಾರತದ ಪ್ರಜಾಪ್ರಭುತ್ವವನ್ನು ಹಿಟ್ಲರ್‌ಶಾಹಿ" ಆಗಿ ಪರಿವರ್ತಿಸಿದೆ ಎಂದು ಆರೋಪಿಸಿದ್ದಾರೆ.

"ಪ್ರತಿಪಕ್ಷಗಳು ಸಂಸತ್ತಿನಲ್ಲಿ ವಿಷಯ ಪ್ರಸ್ತಾಪಿಸಿದರೆ ನೋಟಿಸ್ ನೀಡಲಾಗುತ್ತದೆ. ಛತ್ತೀಸ್‌ಗಢದ ನಮ್ಮ ನಾಯಕರ ಮೇಲೆ ಇಡಿ ದಾಳಿ ನಡೆಸಲಾಗುತ್ತಿದೆ. ಇಂದು ಮಾಧ್ಯಮದ ಅಧ್ಯಕ್ಷರನ್ನು ಬಲವಂತವಾಗಿ ವಿಮಾನದಿಂದ ಕೆಳಗಿಳಿಸಿ ಬಂಧಿಸಲಾಗಿದೆ. ಮೋದಿ ಸರ್ಕಾರ ಭಾರತದ ಪ್ರಜಾಪ್ರಭುತ್ವವನ್ನು ಹಿಟ್ಲರ್‌ಶಿಪ್ ಆಗಿ ಪರಿವರ್ತಿಸಿದೆ. ಈ ಸರ್ವಾಧಿಕಾರವನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಖರ್ಗೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಮೋದಿ ಅವರನ್ನು ಟೀಕಿಸಿದ್ದ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ಇಂದು ಬೆಳಗ್ಗೆ ರಾಷ್ಟ್ರ ರಾಜಧಾನಿಯಲ್ಲಿ ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.

"ಹೆಸರು ಮಾತ್ರ ದಾಮೋದರದಾಸ್ ಮೋದಿ. ಆದರೆ ಅವರು ಮಾಡುವ ಕೆಲಸಗಳು ಮಾತ್ರ ಗೌತಮದಾಸ್ ಅವರದ್ದು" ಎಂದು ಖೇರಾ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

SCROLL FOR NEXT