ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ: ಹೋಟೆಲ್ ನಲ್ಲಿ ಊಟ ಸೇವನೆ ನಂತರ ಐಎಎಸ್ ಅಧಿಕಾರಿ ಸಾವು

ಹೋಟೆಲ್ ವೊಂದರಲ್ಲಿ ಊಟ ಸೇವಿಸಿದ ನಂತರ ಐಎಎಸ್ ಅಧಿಕಾರಿಯೊಬ್ಬರು ಮೃತಪಟ್ಟಿರುವ ಘಟನೆ ಮುಂಬೈಯಲ್ಲಿ ನಡೆದಿದೆ. ಮಹಾರಾಷ್ಟ್ರದ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿದ್ದ 57 ವರ್ಷದ  ಪ್ರಶಾಂತ್ ದತ್ತಾತ್ರೇಯ ನವಘರೆ ಸಾವನ್ನಪ್ಪಿದ್ದ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ.

ಮುಂಬೈ: ಹೋಟೆಲ್ ವೊಂದರಲ್ಲಿ ಊಟ ಸೇವಿಸಿದ ನಂತರ ಐಎಎಸ್ ಅಧಿಕಾರಿಯೊಬ್ಬರು ಮೃತಪಟ್ಟಿರುವ ಘಟನೆ ಮುಂಬೈಯಲ್ಲಿ ನಡೆದಿದೆ. ಮಹಾರಾಷ್ಟ್ರದ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿದ್ದ 57 ವರ್ಷದ  ಪ್ರಶಾಂತ್ ದತ್ತಾತ್ರೇಯ ನವಘರೆ ಸಾವನ್ನಪ್ಪಿದ್ದ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ.

ನವಘರೆ ಬುಧವಾರ ಸಂಜೆ ಹೋಟೆಲ್ ನಲ್ಲಿ ಊಟ ಸೇವಿಸಿದ ನಂತರ ಇದ್ದಕ್ಕಿದ್ದಂತೆ ಕುಸಿದು ಬಿದಿದ್ದಾರೆ. ನಂತರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಪ್ರಕಟಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾವಿಗೆ ಕಾರಣ ತಿಳಿದುಬಂದಿಲ್ಲ.

ಅವರು  ಕಾರ್ಯದರ್ಶಿ ಮಟ್ಟದ ಇಬ್ಬರು ಸಹೋದ್ಯೋಗಿಗಳೊಂದಿಗೆ ಹೋಟೆಲ್ ಗೆ ಊಟಕ್ಕೆ ಬಂದಿದ್ದರು. ನಂತರ ಜೆಜೆ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಅವರ ಅಂಗಾಂಗಳನ್ನು ವಿಶ್ಲೇಷಣೆಗಾಗಿ ಸಂರಕ್ಷಿಸಿಡಲಾಗಿದೆ. ಇತರ ವೈದ್ಯಕೀಯ ಪರೀಕ್ಷೆಗಳ ವರದಿಗಾಗಿ ಕಾಯಲಾಗುತ್ತಿದೆ. ಈ ಸಂಬಂಧ ಮಾತಾ ರಾಮಬಾಯಿ ಅಂಬೇಡ್ಕರ್ ರಸ್ತೆ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್