ಶತ್ರುಘ್ನ ಸಿನ್ಹಾ 
ದೇಶ

2024ರ ಲೋಕಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಗೇಮ್ ಚೇಂಜರ್ ಆಗಲಿದ್ದಾರೆ: ಶತ್ರುಘ್ನ ಸಿನ್ಹಾ

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಪ್ರತಿಪಕ್ಷಗಳೆಲ್ಲಾ ಒಂದುಗೂಡಬೇಕು ಎನ್ನುವ ಮಾತುಕತೆಗಳ ಮಧ್ಯೆ, ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಬಾಲಿವುಡ್ ನಟ ಶತ್ರುಘ್ನ ಸಿನ್ಹಾ ಅವರು ಪಕ್ಷದ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗೇಮ್ ಚೇಂಜರ್ ಆಗಿರಬಹುದು ಎಂದಿದ್ದಾರೆ.

ಪಾಟ್ನಾ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಪ್ರತಿಪಕ್ಷಗಳೆಲ್ಲಾ ಒಂದುಗೂಡಬೇಕು ಎನ್ನುವ ಮಾತುಕತೆಗಳ ಮಧ್ಯೆ, ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಬಾಲಿವುಡ್ ನಟ ಶತ್ರುಘ್ನ ಸಿನ್ಹಾ ಅವರು ಪಕ್ಷದ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗೇಮ್ ಚೇಂಜರ್ ಆಗಿರಬಹುದು ಎಂದಿದ್ದಾರೆ.

ಮಮತಾ ಬ್ಯಾನರ್ಜಿ ಅತ್ಯಂತ ಶಕ್ತಿಶಾಲಿ ಮತ್ತು ಸಮರ್ಥ ಮುಖ್ಯಮಂತ್ರಿ. ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಗೇಮ್ ಚೇಂಜರ್ ಆಗಿರಬಹುದು. ಸದ್ಯ, ಇಡೀ ದೇಶವು ಪ್ರತಿಪಕ್ಷಗಳ ಏಕತೆಗೆ ಒತ್ತಾಯಿಸುತ್ತಿದೆ ಮತ್ತು ವಿರೋಧ ಪಕ್ಷಗಳು ಒಗ್ಗೂಡುತ್ತವೆ ಎಂದು ನನಗೆ ಖಚಿತವಾಗಿದೆ ಎಂದು ಸಿನ್ಹಾ ಬುಧವಾರ ಹೇಳಿದರು.

ನರೇಂದ್ರ ಮೋದಿ ಮತ್ತು ಬಿಜೆಪಿಗೆ ಎದುರಾಗುವ ಕೆಟ್ಟ ದಿನಗಳು ದೂರವಿಲ್ಲ. ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ವಿರೋಧ ಪಕ್ಷಗಳು ಪ್ರಬಲ ಇಚ್ಛಾಶಕ್ತಿ ತೋರಿದರೆ, 2024ರಲ್ಲಿ ಬಿಜೆಪಿ 100ಕ್ಕಿಂತ ಕಡಿಮೆ ಸ್ಥಾನಗಳಿಗೆ ಕುಸಿಯುವುದು ಖಚಿತ ಎಂದು ಸಿನ್ಹಾ ಹೇಳಿದ್ದಾರೆ.

ಬಿಹಾರದ ಸದ್ಯದ ರಾಜಕೀಯ ಪರಿಸ್ಥಿತಿಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ನರೇಂದ್ರ ಮೋದಿ ದೇಶದ ಪ್ರಧಾನಿಯಾಗಬಹುದು ಎಂದಾದರೆ, ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಬಿಹಾರದ ಮುಖ್ಯಮಂತ್ರಿಯಾಗಲು ಏಕೆ ಸಾಧ್ಯವಿಲ್ಲ, ಅದರಲ್ಲಿ ತಪ್ಪೇನಿದೆ ಎಂದು ಅವರು ಹೇಳಿದರು.

ಎಂಸಿಡಿಯಲ್ಲಿ ಎಎಪಿ ಮೇಯರ್ ಚುನಾವಣೆಯಲ್ಲಿ ಗೆದ್ದಿದ್ದಕ್ಕಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿನ್ಹಾ ಅಭಿನಂದಿಸಿದರು.

ಎಎಪಿಯಿಂದ ಮೇಯರ್ ಆಯ್ಕೆಯಾಗುತ್ತಾರೆ ಎಂಬುದು ನನಗೆ ಗೊತ್ತಿತ್ತು. ಇದಕ್ಕಾಗಿ ನಾನು ಸಿಎಂ ಅರವಿಂದ್ ಕೇಜ್ರಿವಾಲ್, ದೆಹಲಿಯ ಜನರು ಮತ್ತು ಆಪ್ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT