ದೇಶ

ಪ್ರಧಾನಿ ವಿರುದ್ಧದ ಹೇಳಿಕೆ ಪ್ರಕರಣ: ಮಧ್ಯಂತರ ಜಾಮೀನು ಆಧಾರದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಬಿಡುಗಡೆಗೆ ಸುಪ್ರೀಂ ಆದೇಶ

Srinivas Rao BV

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
 
ಅರ್ಜಿದಾರರನ್ನು ರಕ್ಷಿಸುವುದಕ್ಕಾಗಿ ಪವನ್ ಖೇರಾಗೆ ಜಾಮೀನು ನೀಡಬೇಕೆಂದು ಸುಪ್ರೀಂ ಕೋರ್ಟ್ ಹೇಳಿದ್ದು, ನ್ಯಾಯವ್ಯಾಪ್ತಿಯ ನ್ಯಾಯಾಲಯದ ಮೂಲಕ ನೀಡುವ ಜಾಮೀನಿನ ಆಧಾರದಲ್ಲಿ ಬಿಡುಗಡೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದೇ ವೇಳೆ ಖೇರಾ ಅವರನ್ನು ಬಂಧಿಸಿದ್ದ ಪ್ರಕರಣದಲ್ಲಿ ಅಸ್ಸಾಂ ಪೊಲೀಸ್ ಹಾಗೂ ಉತ್ತರ ಪ್ರದೇಶ ಪೊಲೀಸರಿಗೆ ಎಫ್ಐಆರ್ ಗಳನ್ನು ಒಟ್ಟಿಗೆ ಸೇರಿಸುವ ಸಂಬಂಧ ನೊಟೀಸ್ ಜಾರಿಗೊಳಿಸುವುದಾಗಿ ಹೇಳಿದೆ.

ಮುಂದಿನ ವಿಚಾರಣೆ ವರೆಗೂ ದ್ವಾರಕಾ ಕೋರ್ಟ್ ನಿಂದ ಮಧ್ಯಂತರ ಜಾಮೀನಿನ ಆಧಾರದಲ್ಲಿ ಅರ್ಜಿದಾರರನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಕೋರ್ಟ್ ಹೇಳಿದ್ದು, ಜಾಮೀನು ಮಂಜೂರು ಮಾಡುವುದಕ್ಕೆ ದ್ವಾರಕಾ ಕೋರ್ಟ್ ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

SCROLL FOR NEXT