ಶಿವಸೇನೆ ನಾಯಕ ಸಂಜಯ್ ರಾವತ್ 
ದೇಶ

ಸಂಜಯ್ ರಾವತ್ ವಿರುದ್ಧ 2ನೇ ಮಾನನಷ್ಟ ಮೊಕದ್ದಮೆ ದಾಖಲು

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಅವರಿಂದ ತಮಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿದ್ದ ಶಿವಸೇನಾ(ಯುಬಿಟಿ) ಮುಖಂಡ ಸಂಜಯ್ ರಾವತ್ ವಿರುದ್ಧ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಮತ್ತೊಂದು...

ಬೀಡ್: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಅವರಿಂದ ತಮಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿದ್ದ ಶಿವಸೇನಾ(ಯುಬಿಟಿ) ಮುಖಂಡ ಸಂಜಯ್ ರಾವತ್ ವಿರುದ್ಧ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಮತ್ತೊಂದು ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಶಿವಸೇನೆಯ ಬೀಡ್ ಜಿಲ್ಲಾ ಘಟಕದ ಮುಖ್ಯಸ್ಥರು ಗುರುವಾರ ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರಾವತ್ ಅವರ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎರಡನೇ ಎಫ್‌ಐಆರ್ ಇದಾಗಿದೆ.

ಇದೇ ಹೇಳಿಕೆಗೆ ಸಂಬಂಧಿಸಿದಂತೆ ಸಂಜಯ್ ರಾವತ್ ಅವರ ವಿರುದ್ಧ ಥಾಣೆ ನಗರದ ಕಪುರಬಾವಡಿ ಪೊಲೀಸ್ ಠಾಣೆಯಲ್ಲಿ ಬುಧವಾರ ರಾತ್ರಿ ಮೊದಲ ಪ್ರಕರಣ ದಾಖಲಾಗಿತ್ತು.

ಬೀಡ್ ನಗರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ, ರಾಜ್ಯಸಭಾ ಸದಸ್ಯ ರಾವತ್ ವಿರುದ್ಧ ಭಾರತೀಯ ದಂಡ ಸಂಹಿತೆ(ಐಪಿಸಿ) ಸೆಕ್ಷನ್ 153 (ಎ) (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 500 ಮತ್ತು 501ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!