ಸುಪ್ರೀಂ ಕೋರ್ಟ್ 
ದೇಶ

ಅದಾನಿ ಗ್ರೂಪ್ -ಹಿಂಡನ್ ಬರ್ಗ್ ವರದಿ ಪ್ರಕರಣ: ಮಾಧ್ಯಮಗಳಿಗೆ ನಿರ್ಬಂಧಕಾಜ್ಞೆ ಹೊರಡಿಸಲು ಸುಪ್ರೀಂ ಕೋರ್ಟ್ ನಕಾರ

ನ್ಯಾಯಾಲಯವು ತನ್ನ ಆದೇಶವನ್ನು ಪ್ರಕಟಿಸುವವರೆಗೆ ಅದಾನಿ-ಹಿಂಡೆನ್‌ಬರ್ಗ್ ವಿಷಯದ ಕುರಿತು ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ನವದೆಹಲಿ: ನ್ಯಾಯಾಲಯವು ತನ್ನ ಆದೇಶವನ್ನು ಪ್ರಕಟಿಸುವವರೆಗೆ ಅದಾನಿ-ಹಿಂಡೆನ್‌ಬರ್ಗ್ ವಿಷಯದ ಕುರಿತು ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿ ಹೊರಬಿದ್ದ ನಂತರ ಅದಾನಿ ಗ್ರೂಪ್ ಷೇರುಗಳ ಕುಸಿತದ ಕುರಿತು ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿದ್ದವು. ಮನ್ನೆ ಫೆಬ್ರವರಿ 20 ರಂದು ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿತ್ತು.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಈ ವಿಷಯವನ್ನು ಪ್ರಸ್ತಾಪಿಸಿದ ವಕೀಲ ಎಂ ಎಲ್ ಶರ್ಮಾ ಅವರ ಮನವಿಯನ್ನು ಇಂದು ತಿರಸ್ಕರಿಸಿತು. "ನಾವು ಮಾಧ್ಯಮಗಳಿಗೆ ಯಾವುದೇ ತಡೆಯಾಜ್ಞೆ ನೀಡುವುದಿಲ್ಲ" ಎಂದು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠ ಹೇಳಿದೆ.

ಅರ್ಜಿದಾರರೊಬ್ಬರ ಸಲಹೆ ಮತ್ತು ಪಿಐಎಲ್‌ಗಳ ಬ್ಯಾಚ್‌ನಲ್ಲಿ ಫೋರ್ಬ್ಸ್ ಪ್ರಕಟಿಸಿದ ವರದಿಯನ್ನು ದಾಖಲಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿತ್ತು. ಫೆಬ್ರವರಿ 17 ರಂದು ಸುಪ್ರೀಂ ಕೋರ್ಟ್ ಷೇರು ಮಾರುಕಟ್ಟೆಗೆ ನಿಯಂತ್ರಣ ಕ್ರಮಗಳನ್ನು ಬಲಪಡಿಸುವ ಉದ್ದೇಶಿತ ತಜ್ಞರ ಸಮಿತಿಯ ಕುರಿತು ಕೇಂದ್ರದ ಸಲಹೆಯನ್ನು ಮುಚ್ಚಿದ ಲಕೋಟೆಯಲ್ಲಿ ಸ್ವೀಕರಿಸಲು ನಿರಾಕರಿಸಿತ್ತು.

ಹೂಡಿಕೆದಾರರ ಹಿತದೃಷ್ಟಿಯಿಂದ ಸಂಪೂರ್ಣ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಬಯಸುತ್ತಿರುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್ ಮುಚ್ಚಿದ ಲಕೋಟೆಯಲ್ಲಿ ಕೇಂದ್ರದ ಸಲಹೆಯನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದೆ.

"ನಾವು ಸಂಪೂರ್ಣ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಬಯಸುವ ಕಾರಣ ನಾವು ನಿಮ್ಮ ಮುಚ್ಚಿದ ಕವರ್ ಸಲಹೆಯನ್ನು ಸ್ವೀಕರಿಸುವುದಿಲ್ಲ" ಎಂದು ಪೀಠ ಹೇಳಿತು.

ಫೆಬ್ರವರಿ 10 ರಂದು, ಅದಾನಿ ಗ್ರೂಪ್ ಸ್ಟಾಕ್ ರೂಟ್ ಹಿನ್ನಲೆಯಲ್ಲಿ ಭಾರತೀಯ ಹೂಡಿಕೆದಾರರ ಹಿತಾಸಕ್ತಿಗಳನ್ನು ಮಾರುಕಟ್ಟೆಯ ಏರಿಳಿತದಿಂದ ರಕ್ಷಿಸಬೇಕಾಗಿದೆ ಎಂದು ಹೇಳಿತ್ತು. ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ಡೊಮೇನ್ ತಜ್ಞರ ಸಮಿತಿಯನ್ನು ಸ್ಥಾಪಿಸಲು ಪರಿಗಣಿಸುವಂತೆ ಕೇಂದ್ರವನ್ನು ಕೇಳಿದೆ. 

ಇಲ್ಲಿಯವರೆಗೆ, ವಕೀಲರಾದ ಎಂಎಲ್ ಶರ್ಮಾ ಮತ್ತು ವಿಶಾಲ್ ತಿವಾರಿ, ಕಾಂಗ್ರೆಸ್ ಮುಖಂಡ ಜಯ ಠಾಕೂರ್ ಮತ್ತು ಕಾರ್ಯಕರ್ತ ಮುಖೇಶ್ ಕುಮಾರ್ ಅವರು ಈ ವಿಷಯದ ಕುರಿತು ನಾಲ್ಕು ಸಾರ್ವಜನಿಕ ಹಿತಾಸಕ್ತಿಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದಾರೆ.

ಹಿಂಡೆನ್‌ಬರ್ಗ್ ರಿಸರ್ಚ್ ವ್ಯಾಪಾರ ಸಮೂಹದ ವಿರುದ್ಧ ಮೋಸದ ವಹಿವಾಟುಗಳು ಮತ್ತು ಷೇರು ಬೆಲೆಯ ಕುಶಲತೆ ಸೇರಿದಂತೆ ಆರೋಪಗಳನ್ನು ಮಾಡಿದ ನಂತರ ಅದಾನಿ ಗ್ರೂಪ್ ಷೇರುಗಳು ಕುಸಿತ ಕಂಡವು. ಅದಾನಿ ಗ್ರೂಪ್ ಆರೋಪಗಳನ್ನು ಸುಳ್ಳು ಎಂದು ತಳ್ಳಿಹಾಕಿದೆ, ಅಲ್ಲದೆ ಸಂಸ್ಥೆ ಕಾನೂನು ಕ್ರಮಗಳನ್ನು ಅನುಸರಿಸಿಕೊಂಡು ಬಂದಿದೆ ಎಂದು ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT