ಲಾಲು ಪ್ರಸಾದ್ ಯಾದವ್ 
ದೇಶ

ಬಿಜೆಪಿ ದೇಶವನ್ನು ಜಾತಿ, ಧರ್ಮದ ಆಧಾರದಲ್ಲಿ ಒಡೆಯಲು ಯತ್ನಿಸುತ್ತಿದೆ: ಲಾಲು ಪ್ರಸಾದ್ ಯಾದವ್

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು, ಕೇಸರಿ ಪಕ್ಷ ಜಾತಿ ಮತ್ತು ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಶನಿವಾರ

ಪೂರ್ಣೆ: ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು, ಕೇಸರಿ ಪಕ್ಷ ಜಾತಿ ಮತ್ತು ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಶನಿವಾರ ಆರೋಪಿಸಿದ್ದಾರೆ.

ದೇಶದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಅಲ್ಪಸಂಖ್ಯಾತರ ವಿರುದ್ಧವಾಗಿವೆ ಎಂದು ಆರ್ ಜೆಡಿ ಮುಖ್ಯಸ್ಥ ಕಿಡಿಕಾರಿದ್ದಾರೆ.

ಸಿಂಗಾಪುರದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಯ ನಂತರ ಇತ್ತೀಚೆಗೆ ದೇಶಕ್ಕೆ ಮರಳಿದ ಲಾಲು, ಇಂದು ದೆಹಲಿಯಿಂದ ವರ್ಚುವಲ್ ಮೂಲಕ ಮಹಾ ಮೈತ್ರಿಯ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು.

"ಬಿಜೆಪಿ ಮತ್ತು ಆರೆಸ್ಸೆಸ್ ದೇಶದ ಅಲ್ಪಸಂಖ್ಯಾತರು ಹಾಗೂ ಸಮಾಜದ ದುರ್ಬಲ ವರ್ಗಗಳ ವಿರುದ್ಧವಾಗಿದೆ... ನಾವು(ಮಹಾ ಮೈತ್ರಿ) 2024ರ ಲೋಕಸಭೆ ಮತ್ತು 2025ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುತ್ತೇವೆ" ಎಂದು ಹೇಳಿದರು.

ಬಿಜೆಪಿ ಮತ್ತು ಆರೆಸ್ಸೆಸ್ ಎರಡೂ ಮೀಸಲಾತಿಗೆ ವಿರುದ್ಧವಾಗಿದ್ದು, ಸಂವಿಧಾನವನ್ನು ಬದಲಾಯಿಸಲು ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಪ್ರಯತ್ನಿಸುತ್ತಿವೆ ಎಂದು ಲಾಲು ಪ್ರಸಾದ್ ಆರೋಪಿಸಿದ್ದಾರೆ.

"ನಮ್ಮ ಹೋರಾಟ ಆರ್‌ಎಸ್‌ಎಸ್ ಸಿದ್ಧಾಂತದ ವಿರುದ್ಧವಾಗಿದೆ. ಬಿಜೆಪಿ, ಆರ್‌ಎಸ್‌ಎಸ್ ಸೂಚನೆಗಳನ್ನು ಪಾಲಿಸುತ್ತಿದೆ. ಬಿಹಾರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತುಹಾಕಲಾಗಿದೆ. ಇದೇ ರೀತಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲಾಗುವುದು" ಎಂದು ಲಾಲು ಪ್ರಸಾದ್ ಯಾದವ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz crisis: 'ಇರಾನ್ ಯುದ್ಧದಿಂದಾಗಿ ನಾವಿಕರ ಕಳೆದುಕೊಂಡ ಏಕೈಕ ದೇಶ ಭಾರತ': Vikram Misri

ಸಂಸತ್ತಿನಲ್ಲಿ ಪ್ರಮುಖ ವಿಷಯಗಳ ಬದಲಿಗೆ 'ಸಮೋಸಾ'ಗಳ ಬಗ್ಗೆ ಮಾತನಾಡುತ್ತಿದ್ದ ರಾಘವ್ ಚಡ್ಡಾ: ಎಎಪಿ ಆರೋಪ

'ಮೌನಗೊಳಿಸಲಾಗಿದೆ, ಆದರೆ ಸೋತಿಲ್ಲ': ರಾಜ್ಯಸಭೆ ಉಪನಾಯಕ ಸ್ಥಾನದಿಂದ ಕೆಳಗಿಳಿಸಿದ ಬಳಿಕ ರಾಘವ್ ಚಡ್ಡಾ ಪ್ರತಿಕ್ರಿಯೆ

West Asia Conflict: ಇರಾನ್-ಇಸ್ರೇಲ್ ಯುದ್ಧದ ನಡುವೆ ಪಾಕಿಸ್ತಾನದಲ್ಲಿ ಮತ್ತೆ ಪೆಟ್ರೋಲ್, ಸೀಮೆಎಣ್ಣೆ ಬೆಲೆ ಏರಿಕೆ!

ಇರಾನ್‌ ಯುದ್ಧದ ನಡುವೆ ಅಮೆರಿಕದಲ್ಲಿ ಮಹತ್ವದ ಬೆಳವಣಿಗೆ: ಸೇನಾ ಮುಖ್ಯಸ್ಥರನ್ನು ಕಿತ್ತೆಸೆದ ಟ್ರಂಪ್ ಆಡಳಿತ!

SCROLL FOR NEXT