ಪ್ರಿಯಾಂಕಾ ಗಾಂಧಿ 
ದೇಶ

ಕಾಂಗ್ರೆಸ್ ಕಾರ್ಯಕರ್ತರಿಗೆ ಬಿಜೆಪಿ ವಿರುದ್ಧ ಹೋರಾಡುವ ಧೈರ್ಯವಿದೆ: ಮಹಾಧಿವೇಶನದಲ್ಲಿ ಪ್ರಿಯಾಂಕಾ ಗಾಂಧಿ

ಲೋಕಸಭೆ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳು ಒಂದಾಗುವ ನಿರೀಕ್ಷೆಗಳಿವೆ. ಆದರೆ, ಹೆಚ್ಚಿನ ನಿರೀಕ್ಷೆಗಳು ಕಾಂಗ್ರೆಸ್‌ನಿಂದ ಇವೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ನವ ರಾಯಪುರ: ಲೋಕಸಭೆ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳು ಒಂದಾಗುವ ನಿರೀಕ್ಷೆಗಳಿವೆ. ಆದರೆ, ಹೆಚ್ಚಿನ ನಿರೀಕ್ಷೆಗಳು ಕಾಂಗ್ರೆಸ್‌ನಿಂದ ಇವೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಪಕ್ಷದ ಸಂದೇಶ ಮತ್ತು ಸರ್ಕಾರದ ವೈಫಲ್ಯಗಳನ್ನು ಜನರ ಬಳಿಗೆ ಕೊಂಡೊಯ್ಯುವಂತೆ ಅವರು ಕಾಂಗ್ರೆಸ್ ಕಾರ್ಯಕರ್ತರನ್ನು ಉತ್ತೇಜಿಸಿದರು.

'ಈಗ ನಮಗೆ ಒಂದು ವರ್ಷ ಮಾತ್ರ ಉಳಿದಿದೆ. ನಮ್ಮಲ್ಲಿ (ವಿರೋಧ ಪಕ್ಷಗಳು) ನಿರೀಕ್ಷೆಗಳಿವೆ. ನಾವು ಒಂದಾಗುತ್ತೇವೆ. ಎಲ್ಲಾ ವಿರೋಧ ಪಕ್ಷಗಳು ಮತ್ತು ಅವರ (ಬಿಜೆಪಿ) ಸಿದ್ಧಾಂತವನ್ನು ವಿರೋಧಿಸುವ ಜನರು ಒಗ್ಗಟ್ಟಿನಿಂದ ಹೋರಾಡಬೇಕು. ಪ್ರತಿಯೊಬ್ಬರಿಂದಲೂ ನಿರೀಕ್ಷೆಗಳಿವೆ ಆದರೆ, ಹೆಚ್ಚಿನ ನಿರೀಕ್ಷೆಗಳು ಕಾಂಗ್ರೆಸ್‌ನಿಂದ ಇವೆ' ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇಲ್ಲಿ ನಡೆದ ಕಾಂಗ್ರೆಸ್‌ನ 85ನೇ ಮಹಾಧಿವೇಶನದಲ್ಲಿ ಹೇಳಿದರು.

ಪಕ್ಷಕ್ಕಾಗಿ ಹೋರಾಡುವ ಕಾಂಗ್ರೆಸ್ ಕಾರ್ಯಕರ್ತರ ಹೋರಾಟವನ್ನು ಅವರು ಶ್ಲಾಘಿಸಿದರು.

'ನಿಮಗೆ ಬಿಜೆಪಿ ವಿರುದ್ಧ ಹೋರಾಡುವ ಧೈರ್ಯವಿದೆ ಎಂದು ನಮಗೆ ತಿಳಿದಿದೆ. ದೇಶಕ್ಕಾಗಿ ಆ ಧೈರ್ಯವನ್ನು ಪ್ರದರ್ಶಿಸುವ ಸಮಯ ಬಂದಿದೆ'. ಮಂಡಲ ಮಟ್ಟದಿಂದಲೇ ಕಾಂಗ್ರೆಸ್‌ ಸಂಘಟನೆ ಕಟ್ಟಬೇಕು ಮತ್ತು ಬಲಪಡಿಸಬೇಕು ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್