ವಿ.ಡಿ ಸಾವರ್ಕರ್ 
ದೇಶ

ಕರೆನ್ಸಿ ನೋಟುಗಳಲ್ಲಿ ಗಾಂಧಿ ಬದಲಿಗೆ ಸಾವರ್ಕರ್ ಫೋಟೋ ಹಾಕಿ: ಹಿಂದೂ ಮಹಾಸಭಾ ಒತ್ತಾಯ

ಕರೆನ್ಸಿ ನೋಟುಗಳ ಮೇಲಿನ ಮಹಾತ್ಮ ಗಾಂಧಿ ಫೋಟೋ ತೆಗೆದು ವಿಡಿ ಸಾವರ್ಕರ್ ಮತ್ತಿತರ ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿ ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಭಾನುವಾರ ಒತ್ತಾಯಿಸಿದೆ.

ಮೀರತ್: ಕರೆನ್ಸಿ ನೋಟುಗಳ ಮೇಲಿನ ಮಹಾತ್ಮ ಗಾಂಧಿ ಫೋಟೋ ತೆಗೆದು ವಿಡಿ ಸಾವರ್ಕರ್ ಮತ್ತಿತರ ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿ ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಭಾನುವಾರ ಒತ್ತಾಯಿಸಿದೆ.

ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಬಹಿರಂಗ ಪತ್ರ ಬರೆದಿರುವ ಹಿಂದೂ ಮಹಾಸಭಾ, ಸಂಸತ್ ಭವನಕ್ಕೆ ಹೋಗುವ ರಸ್ತೆಗೆ ಸಾವರ್ಕರ್ ಅವರ ಹೆಸರನ್ನು ಮರುನಾಮಕರಣ ಮಾಡುವಂತೆ ಕೇಳಿಕೊಂಡಿದೆ. ಇದು ಮೋದಿ ಸರ್ಕಾರದಿಂದ ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿಂದೂ ಮಹಾಸಭಾದ ಮಾಜಿ ಅಧ್ಯಕ್ಷ ಸಾವರ್ಕರ್ ಅವರಿಗೆ ನೀಡಲಿರುವ ನಿಜವಾದ ಗೌರವವಾಗಿದೆ ಎಂದು ಮಹಾಸಭಾ ಮುಖಂಡರು ಹೇಳಿದ್ದಾರೆ. 

ಶಾರದಾ ರಸ್ತೆಯಲ್ಲಿರುವ ಅಖಿಲ ಭಾರತ ಹಿಂದೂ ಮಹಾಸಭಾದ ಕಚೇರಿಯಲ್ಲಿ ಸಾವರ್ಕರ್ ಅವರ 58ನೇ ಪುಣ್ಯತಿಥಿಯನ್ನು ಭಾನುವಾರ ಹವನ ಪೂಜೆ ಹಾಗೂ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿಂದೂ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಪಂಡಿತ್ ಅಶೋಕ್ ಶರ್ಮಾ, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರ್ ಒಬ್ಬ ಮಹಾನ್ ಕ್ರಾಂತಿಕಾರಿ ಎಂದು ಬಣ್ಣಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ; ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದುರ್ಮರಣ

ಊಹಾಪೋಹಕ್ಕೆ ಕೊನೆಗೂ ತೆರೆ: 'ಹೌದು, ಸಿಎಂ ರಾಜೀನಾಮೆ ಕೊಡ್ತಾರಂತೆ': ಆರ್‌ ವಿ ದೇಶಪಾಂಡೆ ಹೇಳಿಕೆ

SCROLL FOR NEXT