ದೇಶ

ಮತದಾನೋತ್ತರ ಸಮೀಕ್ಷೆ: ತ್ರಿಪುರಾ, ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ

Nagaraja AB

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆ ಮುಗಿದಿದ್ದು, ಸೋಮವಾರ ಸಂಜೆ ಮತದಾನೋತ್ತರ ಸಮೀಕ್ಷೆ ಪ್ರಕಟಿಸಲಾಗಿದೆ. ಮೂರು ರಾಜ್ಯಗಳ ಮತ ಎಣಿಕೆ ಮಾರ್ಚ್ 2 ರಂದು ನಡೆಯಲಿದೆ.

ಸಮೀಕ್ಷೆಗಳ ಪ್ರಕಾರ, ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಅದರ ಮಿತ್ರಪಕ್ಷಗಳು  ಅಧಿಕಾರವನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ ಮತ್ತು ಮೇಘಾಲಯದಲ್ಲಿ ಎನ್‌ಪಿಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಯಿದೆ ಎನ್ನಲಾಗಿದೆ. 

ಇಂಡಿಯಾ ಟುಡೆ ಎಕ್ಸಿಟ್ ಪೋಲ್ ಪ್ರಕಾರ, ತ್ರಿಪುರಾದಲ್ಲಿ ಬಿಜೆಪಿ 60 ವಿಧಾನಸಭಾ ಸ್ಥಾನಗಳ ಪೈಕಿ 36-45 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಮತ್ತು ತಿಪ್ರಾ ಮೋಥಾ 9-16 ಸ್ಥಾನಗಳನ್ನು ಗಳಿಸುವ ಸಾಧ್ಯತೆಯಿದೆ. ನಾಗಾಲ್ಯಾಂಡ್‌ನಲ್ಲಿ ಬಿಜೆಪಿ-ಎನ್‌ಡಿಪಿಪಿ ಮೈತ್ರಿಕೂಟ 35-43 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಝೀ ನ್ಯೂಸ್-ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಹೇಳಿದೆ.

ಆದರೆ, ಕಾಂಗ್ರೆಸ್ ಕೇವಲ 1-3 ಮತ್ತು ಎನ್‌ಪಿಎಫ್ 2-5 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಎಕ್ಸಿಟ್ ಪೋಲ್ ಹೇಳಿದೆ. ಆದಾಗ್ಯೂ, ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಮೇಘಾಲಯದಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿಗೆ 21-26 ಸ್ಥಾನಗಳನ್ನು ನೀಡಿದೆ. 

SCROLL FOR NEXT