ದೇಶ

ಹೆಚ್ಚಿನ ಸಿಬಿಐ ಅಧಿಕಾರಿಗಳು ಮನೀಶ್ ಸಿಸೋಡಿಯಾ ಬಂಧನದ ಪರವಾಗಿಲ್ಲ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್

Ramyashree GN

ನವದೆಹಲಿ: ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲು ಹೆಚ್ಚಿನ ಸಿಬಿಐ ಅಧಿಕಾರಿಗಳು ವಿರೋಧಿಸಿದ್ದರು. ಆದರೆ, ರಾಜಕೀಯ ಒತ್ತಡದಿಂದಾಗಿ ಹಾಗೆ ಮಾಡಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.

ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಈಗ ರದ್ದಾದ ಅಬಕಾರಿ ನೀತಿಯಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಭಾನುವಾರ ಸಿಸೋಡಿಯಾ ಅವರನ್ನು ಬಂಧಿಸಿದೆ.

'ಹೆಚ್ಚಿನ ಸಿಬಿಐ ಅಧಿಕಾರಿಗಳು ಮನೀಶ್ ಸಿಸೋಡಿಯಾ ಬಂಧನವನ್ನು ವಿರೋಧಿಸಿದ್ದಾರೆ ಎಂದು ಮಾಹಿತಿ ಬಂದಿದೆ. ಅವರೆಲ್ಲರಿಗೂ ಮನೀಶ್ ಅವರ ಬಗ್ಗೆ ಅಪಾರ ಗೌರವವಿದೆ ಮತ್ತು ಅವರ ವಿರುದ್ಧ ಯಾವುದೇ ಪುರಾವೆಗಳಿಲ್ಲ. ಆದರೆ, ಅವರನ್ನು ಬಂಧಿಸಲು ರಾಜಕೀಯ ಒತ್ತಡ ಹೆಚ್ಚಾಗಿದ್ದರಿಂದ ಅವರು ತಮ್ಮ ರಾಜಕೀಯ ಯಜಮಾನರಿಗೆ ವಿಧೇಯರಾಗಬೇಕಾಯಿತು' ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷ ಜೂನ್‌ನಲ್ಲಿ ದೆಹಲಿಯ ಆಗಿನ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಬಂಧನದ ನಂತರ ಪ್ರತಿಪಕ್ಷ ನಾಯಕರ ವಿರುದ್ಧ ಕೈಗೊಂಡಿರುವ ಕ್ರಮದ ಭಾಗವಾಗಿ ಇದೀಗ ಸಿಸೋಡಿಯಾ ಅವರ ಬಂಧನವಾಗಿದೆ.

ದೆಹಲಿಯ ಶಿಕ್ಷಣ ಮತ್ತು ಆರೋಗ್ಯ ಸೇವೆಗಳ ಯಶಸ್ವಿ ರೂಪಾಂತರ ಎಂದು ಆಮ್ ಆದ್ಮಿ ಪಕ್ಷ ವಿವರಿಸುವ ರೀತಿಯಲ್ಲಿ ಇಬ್ಬರೂ ಮಂತ್ರಿಗಳು ಪಕ್ಷದ ಜನಪ್ರಿಯತೆ ಮತ್ತು ನಿರಂತರ ಚುನಾವಣಾ ಯಶಸ್ಸಿಗೆ ಕೊಡುಗೆ ನೀಡಿದ್ದಾರೆ.

SCROLL FOR NEXT