ಗುಜರಾತ್‌ನ ವಲ್ಸಾದ್ ಜಿಲ್ಲೆಯ ಕೈಗಾರಿಕಾ ಘಟಕದಲ್ಲಿ ಸ್ಫೋಟ 
ದೇಶ

ಗುಜರಾತ್: ಕೈಗಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಸಾವು, ಹಲವರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯ ಕೈಗಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಉದ್ಯೋಗಿಗಳು ಮೃತಪಟ್ಟಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ವಲ್ಸಾದ್: ಗುಜರಾತ್‌ನ ವಲ್ಸಾದ್ ಜಿಲ್ಲೆಯ ಕೈಗಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಉದ್ಯೋಗಿಗಳು ಮೃತಪಟ್ಟಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸೋಮವಾರ ರಾತ್ರಿ 11.30ರ ಸುಮಾರಿಗೆ ವೆನ್ ಪೆಟ್ರೋಕೆಮ್ ಮತ್ತು ಫಾರ್ಮಾದಲ್ಲಿ ಸ್ಫೋಟ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ವಲ್ಸಾದ್ ಜಿಲ್ಲಾ ಉಸ್ತುವಾರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಸಿಂಗ್ ಗುರ್ಜಾರ್ ತಿಳಿಸಿದ್ದಾರೆ.

ಕೇತನ್ ಪಟೇಲ್ ಪ್ರಕಾರ, 'ರಾತ್ರಿ 10.30 ರ ಸುಮಾರಿಗೆ ನನ್ನ ಚಿಕ್ಕಪ್ಪನಿಗೆ (ಕೀರ್ತಿ ಪಟೇಲ್‌) ಸ್ಥಾವರದಿಂದ ಕರೆ ಬಂದಿತು. ನಂತರ ಅವರು ಕೆಲಸಕ್ಕೆ ತೆರಳಿದರು. ರಾತ್ರಿ 11.30 ರ ಸುಮಾರಿಗೆ ನಮಗೆ ಸ್ಥಾವರದಲ್ಲಿ ಸ್ಫೋಟ ಸಂಭವಿಸಿದ ಕುರಿತು ಮಾಹಿತಿ ಬಂದಿದೆ. ಅದಾದ ಬಳಿಕ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿಸಿದರು.

ಅವಶೇಷಗಳಡಿಯಲ್ಲಿ ಇಬ್ಬರು ಸಿಲುಕಿರುವ ಶಂಕೆ ಇದೆ ಎಂದು ಕೇತನ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುವುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಸಂಪೂರ್ಣ ಬದ್ಧ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ: ಟಿ.ಬಿ ಜಯಚಂದ್ರ ಹಂಗಾಮಿ ಸಭಾಧ್ಯಕ್ಷ

ರಷ್ಯಾ-ಭಾರತ ನಡುವೆ ನೇರ ರೈಲು ಸಂಪರ್ಕ? ರಷ್ಯಾದಿಂದ ಮಹತ್ವದ ಪ್ರಸ್ತಾವನೆ!