ಸಾಂದರ್ಭಿಕ ಚಿತ್ರ 
ದೇಶ

2021ರಲ್ಲಿ ವಾಹನ ಚಲಾಯಿಸುವಾಗ ಮೊಬೈಲ್ ಬಳಕೆಯಿಂದ 1,997 ರಸ್ತೆ ಅಪಘಾತ; 1,040 ಮಂದಿ ಸಾವು

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ವರದಿ ಪ್ರಕಾರ, 2021 ರಲ್ಲಿ ಚಾಲಕರು ವಾಹನ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿದ್ದರಿಂದ ಒಟ್ಟು 1,997 ರಸ್ತೆ ಅಪಘಾತಗಳು ಸಂಭವಿಸಿವೆ. ಇದರಲ್ಲಿ 1,040 ಜನರು ಸಾವಿಗೀಡಾಗಿದ್ದಾರೆ ಎಂದಿದೆ.

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ವರದಿ ಪ್ರಕಾರ, 2021 ರಲ್ಲಿ ಚಾಲಕರು ವಾಹನ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿದ್ದರಿಂದ ಒಟ್ಟು 1,997 ರಸ್ತೆ ಅಪಘಾತಗಳು ಸಂಭವಿಸಿವೆ. ಇದರಲ್ಲಿ 1,040 ಜನರು ಸಾವಿಗೀಡಾಗಿದ್ದಾರೆ ಎಂದಿದೆ.

'ಭಾರತದಲ್ಲಿ ರಸ್ತೆ ಅಪಘಾತಗಳು- 2021' ಎಂಬ ಶೀರ್ಷಿಕೆಯ ವರದಿಯು 2021 ರಲ್ಲಿ ಕೆಂಪು ದೀಪದ ಜಂಪ್‌ನಿಂದ 555 ರಸ್ತೆ ಅಪಘಾತಗಳು ಸಂಭವಿಸಿದ್ದು, 222 ಜೀವಗಳನ್ನು ಬಲಿ ಪಡೆದಿದೆ ಎಂದು ಹೇಳಿದೆ.

ವರದಿಯ ಪ್ರಕಾರ, 2021 ರಲ್ಲಿ ಒಟ್ಟು 3,625 ಅಪಘಾತಗಳು ಸಂಭವಿಸಿದ್ದು, 1,481 ಜನರು ಸಾವಿಗೀಡಾಗಿದ್ದಾರೆ.

ಹಲವು ಕಾರಣಗಳಿಗಾಗಿ ರಸ್ತೆ ಅಪಘಾತಗಳು ಸಂಭವಿಸುತ್ತವೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಎಲ್ಲಾ ಏಜೆನ್ಸಿಗಳ ಸಂಘಟಿತ ಪ್ರಯತ್ನಗಳ ಮೂಲಕ ಸಮಸ್ಯೆಗಳನ್ನು ತಗ್ಗಿಸಲು ಬಹುಮುಖಿ ಕ್ರಮಗಳ ಅಗತ್ಯವಿದೆ ಎಂದು ವರದಿ ಹೇಳಿದೆ.

ಶಿಕ್ಷಣ, ಎಂಜಿನಿಯರಿಂಗ್ (ರಸ್ತೆ ಮತ್ತು ವಾಹನಗಳೆರಡೂ), ಜಾರಿ ಮತ್ತು ತುರ್ತು ಆರೈಕೆಯ ಆಧಾರದ ಮೇಲೆ ರಸ್ತೆ ಸುರಕ್ಷತೆಯ ಸಮಸ್ಯೆಯನ್ನು ಪರಿಹರಿಸಲು ರಸ್ತೆ ಸಚಿವಾಲಯವು ಬಹುಮುಖಿ ಕಾರ್ಯತಂತ್ರವನ್ನು ರೂಪಿಸಿದೆ ಎಂದು ಅದು ಹೇಳಿದೆ.

2021ರಲ್ಲಿ ಒಟ್ಟು 4,12,432 ರಸ್ತೆ ಅಪಘಾತಗಳು ಸಂಭವಿಸಿವೆ. ಈ ಪೈಕಿ 1,53,972 ಜನರು ಸಾವಿಗೀಡಾಗಿದ್ದಾರೆ ಮತ್ತು 3,84,448 ಜನರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT