ಮುಂಬೈ: ನಾಸಿಕ್ ನ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದು 17 ಮಂದಿಗೆ ಗಾಯಗಳಾಗಿವೆ.
ಜಿಂದಾಲ್ ಪಾಲಿ ಫಿಲ್ಮ್ಸ್ ರಾಸಾಯನಿಕ ಕಾರ್ಖಾನೆಯ ಬಾಯ್ಲರ್ ನಲ್ಲಿ ಈ ಅವಘಡ ಸಂಭವಿಸಿದೆ. ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಇಗಟ್ಪುರಿ, ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಸದ್ದು ಪಕ್ಕದ ಗ್ರಾಮಗಳಿಗೂ ಕೇಳಿಸಿದೆ. ಘಟನೆಯ ಸ್ಥಳಕ್ಕೆ ಸಿಎಂ ಏಕನಾಥ್ ಶಿಂಧೆ ಭೇಟಿ ನೀಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಸಂಬಂಧ ಉನ್ನತಮಟ್ಟದ ತನಿಖೆ ನಡೆಸಲಾಗುತ್ತಿದೆ.