ಭೀಕರ ರಸ್ತೆ ಅಪಘಾತ: ಸ್ಕೂಟರ್ ಗೆ ಢಿಕ್ಕಿ ಹೊಡೆದು, ಮಹಿಳೆಯನ್ನು 4 ಕಿ.ಮೀ ಎಳೆದೊಯ್ದ ಕಾರು; ಮಹಿಳೆ ಸಾವು
ದೆಹಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ಚಲಿಸುತ್ತಿದ್ದ ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದು ಮಹಿಳೆಯನ್ನು 4 ಕಿ.ಮೀ ಎಳೆದೊಯ್ದು ಪರಿಣಾಮ ಆಕೆ ಮೃತಪಟ್ಟಿದ್ದಾರೆ.
ನವದೆಲಿ: ದೆಹಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ಚಲಿಸುತ್ತಿದ್ದ ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದು ಮಹಿಳೆಯನ್ನು 4 ಕಿ.ಮೀ ಎಳೆದೊಯ್ದು ಪರಿಣಾಮ ಆಕೆ ಮೃತಪಟ್ಟಿದ್ದಾರೆ.
ಅಮನ್ ವಿಹಾರ್ ನಿವಾಸಿ ಅಂಜಲಿ ಮೃತ ಯುವತಿಯಾಗಿದ್ದು, ಹೊಸ ವರ್ಷಾಚರಣೆ ಆರಂಭವಾದ ಕೆಲವೇ ಘಂಟೆಗಳಲ್ಲಿ ಈ ಘಟನೆ ನಡೆದಿದೆ. ಕಾರು ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಚಕ್ರಕ್ಕೆ ಮಹಿಳೆ ಸಿಲುಕಿದ್ದಾರೆ, ಆದರೂ ಕಾರು 4 ಕಿ.ಮೀ ವರೆಗೂ ಚಲಿಸಿದೆ. ಸ್ಥಳೀಯರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆಗೆ ಕಾರಣವಾದ ಬಲೆನೋ ಕಾರಿನಲ್ಲಿದ್ದ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಾರು ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದು, ಕಾರಿನ ಕೆಳಗೆ ಮಹಿಳೆ ಸಿಲುಕಿದ್ದಾರೆ ಎಂಬುದು ತಿಳಿದಿರಲಿಲ್ಲ ಎಂದು ಬಂಧಿತರು
ವಿಚಾರಣೆ ವೇಳೆ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.