ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮುಂದಿನ ವರ್ಷ ಭಾರತದಿಂದ ಮಾನವ ಸಹಿತ ಬಾಹ್ಯಾಕಾಶ ಮಿಷನ್

ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) 2024 ರಲ್ಲಿ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನವನ್ನು ಕೈಗೊಳ್ಳಲಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಮಿಷನ್ ಯೋಜನೆ ಗಗನ್ ಯಾನ್ (ಸಾಂಕೇತಿಕ ಚಿತ್ರ)
Srinivas Rao BV
Updated On : 1 Jan 2023, 9:06 pm

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ)  2024 ರಲ್ಲಿ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನವನ್ನು ಕೈಗೊಳ್ಳಲಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಭಾರತ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ನಿರಂತರ ಹೊಸ ಸಾಧನೆಗಳನ್ನು ಮಾಡುತ್ತಿದೆ ಎಂದು ಸಚಿವರು ಹೇಳಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಹೊಸ ಉತ್ತುಂಗಕ್ಕೆ ಏರುತ್ತಿದೆ. ಇದರ ಪರಿಣಾಮವಾಗಿ 2024 ರ ವೇಳೆಗೆ ಮೊದಲ ಸ್ವಾವಲಂಬಿ ಗಗನ್ ಯಾನ್ ಮೂಲಕ ಭಾರತ ಬಾಹ್ಯಾಕಾಶವನ್ನು ಪ್ರವೇಶಿಸುತ್ತಿದೆ ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ.

Advertisement

Advertisement

ಇದನ್ನೂ ಓದಿ: ಇಸ್ರೋ ಗಗನ್ ಯಾನ್ ನ ವ್ಯೋಮಮಿತ್ರ ಪರಿಚಯ ಇಲ್ಲಿದೆ

ಗಗನ್ ಯಾನ್ 2022 ರಲ್ಲೇ ಸಾಕಾರವಾಗಬೇಕಿತ್ತು ಆದರೆ ಕೋವಿಡ್-19 ನಿಂದಾಗಿ ವಿಳಂಬವಾಗಿದೆ, 2024 ರಲ್ಲಿ ಎರಡು ಪ್ರಾಥಮಿಕ ಉಡಾವಣೆಗಳಾಗಲಿವೆ ಏಕೆಂದರೆ ಗಗನ್ ಯಾನ್ ರಾಕೆಟ್ ಸುರಕ್ಷಿತವಾಗಿ ಬಾಹ್ಯಾಕಾಶಕ್ಕೆ ತೆರಳಿಂದತೆಯೇ ಸುರಕ್ಷಿತವಾಗಿ ವಾಪಸ್ಸಾಗುವುದನ್ನು ಖಾತ್ರಿಪಡಿಸಿಕೊಳ್ಳಬೇಕಿದೆ. ಮತ್ತೊಂದು ಪ್ರಯೋಗದಲ್ಲಿ ಮನುಷ್ಯರಿಲ್ಲದೇ ಕೇವಲ ರೋಬೋಟ್ ರಾಕೆಟ್ ನಲ್ಲಿರಲಿದ್ದು, ಎರಡೂ ಪ್ರಯೋಗಗಳು ಯಶಸ್ವಿಯಾದ ನಂತರ ಮೂರನೇ ಬಾರಿಗೆ ಮಾನವ ಸಹಿತ ಬಾಹ್ಯಾಕಾಶ ಯಾನ ಸಾಕಾರಗೊಳ್ಳಲಿದೆ ಎಂದು ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments