ರಾಜಸ್ಥಾನದಲ್ಲಿ ಹಳಿ ತಪ್ಪಿದ ರೈಲು 
ದೇಶ

ರಾಜಸ್ಥಾನ: ಹಳಿ ತಪ್ಪಿದ ಎಕ್ಸ್ ಪ್ರೆಸ್ ರೈಲಿನ 13 ಬೋಗಿಗಳು; 26 ಮಂದಿಗೆ ಗಾಯ 

ರಾಜಸ್ಥಾನದಲ್ಲಿ ಬಾಂದ್ರ-ಜೋಧ್ ಪುರ ಸೂರ್ಯನಗರಿ ಎಕ್ಸ್ ಪ್ರೆಸ್ ರೈಲಿನ 13 ಬೋಗಿಗಳು ಹಳಿ ತಪ್ಪಿದ್ದು ಪರಿಣಾಮ 26 ಮಂದಿಗೆ ಗಾಯಗಳಾಗಿವೆ.

ಜೈಪುರ: ರಾಜಸ್ಥಾನದಲ್ಲಿ ಬಾಂದ್ರ-ಜೋಧ್ ಪುರ ಸೂರ್ಯನಗರಿ ಎಕ್ಸ್ ಪ್ರೆಸ್ ರೈಲಿನ 13 ಬೋಗಿಗಳು ಹಳಿ ತಪ್ಪಿದ್ದು ಪರಿಣಾಮ 26 ಮಂದಿಗೆ ಗಾಯಗಳಾಗಿವೆ.

ಈ ಪೈಕಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಘಟನೆ ನಡೆದ ಪಾಲಿ ಬಳಿಯ ಬಾಂಗಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದಾಗಿ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಕನಿಷ್ಟ 2 ಗಂಟೆಗಳ ಕಾಲ ವ್ಯತ್ಯಯವಾಗಿದೆ ಅಥವಾ ಕೆಲವು ರೈಲುಗಳ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ.

ಸಂಜೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ತೀವ್ರವಾಗಿ ಗಾಯಗೊಂಡವರಿಗೆ ರೈಲ್ವೆ ಸಚಿವರು 1 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದು, ಸಣ್ಣಪುಟ್ಟ ಗಾಯಗಳಾದವರಿಗೆ 25,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಬೆಳಿಗ್ಗೆ 3.27 ರ ವೇಳೆಗೆ 13 ಕೋಚ್ ಗಳು ಹಳಿ ತಪ್ಪಿದ್ದವು. ತಕ್ಷಣವೇ ಕಾರ್ಯಾಚರಣೆ ನಡೆಸಿ ಗಾಯಗೊಂಡಿದ್ದ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!