ದೇಶ

ಉತ್ತರ ಪ್ರದೇಶ: ಭೂತ ಬಿಡಿಸುವ ನೆಪದಲ್ಲಿ 14ರ ಬಾಲಕಿಯ ಮೇಲೆ ಅತ್ಯಾಚಾರ, ಮಂತ್ರವಾದಿ ಬಂಧನ

ಭೂತ ಬಿಡಿಸುವ ನೆಪದಲ್ಲಿ ಮಂತ್ರವಾದಿಯೊಬ್ಬ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಕೌಶಾಂಬಿ: ಭೂತ ಬಿಡಿಸುವ ನೆಪದಲ್ಲಿ ಮಂತ್ರವಾದಿಯೊಬ್ಬ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಂತ್ರವಾದಿ ಅಶೋಕ್ ಕುಮಾರ್ ಎನ್ನುವ ವ್ಯಕ್ತಿಯಯನ್ನು ಕೌಶಾಂಬಿ ಜಿಲ್ಲೆಯ ಪಿಪ್ರಿ ಪೊಲೀಸರು ಬಂಧಿಸಿ ಪೋಕ್ಸೊ ಅಡಿ ಪ್ರಕರಣ ದಾಖಲಿಸಿದ್ದಾರೆ.

ಉತ್ತರ ಪ್ರದೇಶದ ಪಿಪ್ರಿ ಪೊಲೀಸ್ ಠಾಣೆಯ ವ್ಯಾಪ್ತಿ ನಿವಾಸಿಯೊಬ್ಬಳು ಕಳೆದ ಮೂರು ವರ್ಷಗಳಿಂದ ಮೂರ್ಛೆ ರೋಗದಿಂದ ಬಳಲುತ್ತಿದ್ದಳು. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಬಾಲಕಿಯ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿರಲಿಲ್ಲ.

ಖಾಯಿಲೆಯಿಂದ ಬಳಲುತ್ತಿದ್ದ ತಮ್ಮ ಮಗಳನ್ನು ಗುಣಮುಖ ಮಾಡುತ್ತಾರೆ ಎಂದು ಅಶೋಕ್ ಕುಮಾರ್ ಬಳಿ ಬಾಲಕಿಯ ತಂದೆ ಕರೆದುಕೊಂಡು ಹೋಗಿದ್ದರು. ಕೆಲ ದಿನಗಳ ನಂತರ ಬಾಲಕಿಯನ್ನು ಪರಿಚಯ ಮಾಡಿಕೊಂಡು ದೆವ್ವ ಬಿಡಿಸುತ್ತೇನೆಂದು ಅಶೋಕ್ ಕುಮಾರ್ ಅತ್ಯಾಚಾರ ಮಾಡಿದ್ದಾನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಇದಾದ ಬಳಿಕ ಅಶೋಕ್ ಕುಮಾರ್ ಬಾಲಕಿಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಘಟನೆಗೆ ಸಂಬಂಧಿಸಿ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪೋಕ್ಸೋ ಕಾಯ್ದೆಯಡಿಯಯಲ್ಲಿ ಅಶೋಕ್‍ ಕುಮಾರ್‌ನನ್ನು ಬಂಧಿಸಿದ್ದಾರೆ.  ಸದ್ಯ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT