ಐಇಡಿ ಸ್ಫೋಟ ಸಂಭವಿಸಿದ ಪ್ರದೇಶದಲ್ಲಿ ಸೇನೆ 
ದೇಶ

ರಜೌರಿ: 2 ಬಾರಿ ಭಯೋತ್ಪಾದಕರ ದಾಳಿ- ಅಪ್ರಾಪ್ತ ಸಹೋದರ-ಸಹೋದರಿ ಸಾವು

ರಜೌರಿಯಲ್ಲಿ ಭಯೋತ್ಪಾದಕ ದಾಳಿಯಲ್ಲಿ 7 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡ ಬೆನ್ನಲ್ಲೇ ಅಪ್ಪರ್ ಡಾಂಗ್ರಿ ಗ್ರಾಮದಲ್ಲಿ ಸ್ಫೋಟ ಸಂಭವಿಸಿದ್ದು, ಸಹೋದರ-ಸಹೋದರಿಯರಿಬ್ಬರು ಸಾವನ್ನಪ್ಪಿದ್ದಾರೆ ಇನ್ನೂ 6 ಮಂದಿಗೆ ಗಾಯಗಳಾಗಿವೆ.

ರಜೌರಿ: ರಜೌರಿಯಲ್ಲಿ ಭಯೋತ್ಪಾದಕ ದಾಳಿಯಲ್ಲಿ 7 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡ ಬೆನ್ನಲ್ಲೇ ಅಪ್ಪರ್ ಡಾಂಗ್ರಿ ಗ್ರಾಮದಲ್ಲಿ ಸ್ಫೋಟ ಸಂಭವಿಸಿದ್ದು, ಸಹೋದರ-ಸಹೋದರಿಯರಿಬ್ಬರು ಸಾವನ್ನಪ್ಪಿದ್ದಾರೆ ಇನ್ನೂ 6 ಮಂದಿಗೆ ಗಾಯಗಳಾಗಿವೆ.

ಭಾನುವಾರ ಸಂಜೆ ಪ್ರೀತಮ್ ಲಾಲ್ ಅವರ ಮನೆಯ ಬಳಿ ಸ್ಫೋಟ ಸಂಭವಿಸಿತ್ತು. ಲಾಲ್ ಅವರ ಸಂಬಂಧಿಕರೂ ಸೇರಿದಂತೆ ಹಲವರಿಗೆ ಗಾಯಗಳಾಗಿತ್ತು. 

ಗಾಯಾಳುಗಳನ್ನು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಸಾನ್ವಿ ಶರ್ಮಾ (7) ವಿಹಾನ್ ಕುಮಾರ್ ಶರ್ಮಾ (4) ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ. 

ಗ್ರಾಮದಲ್ಲಿ ಮೂರು ಹಿಂದೂಗಳ ಮನೆಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ನಾಲ್ವರನ್ನು ಹತ್ಯೆ ಮಾಡಿದ 12 ಗಂಟೆಗಳ ಅವಧಿಯಲ್ಲೇ ಈ ಸ್ಫೋಟ ಸಂಭವಿಸಿದ್ದು, ಸ್ಫೋಟದಲ್ಲಿ ಪ್ರೀತಮ್ ಶರ್ಮಾ (55) ಆತನ 33 ವರ್ಷದ ಪುತ್ರ ಆಶೀಷ್ ಕುಮಾರ್, ದೀಪಕ್ ಕುಮಾರ್ (23) ಶೀತಲ್ ಕುಮಾರ್ (48) ಸಾವನ್ನಪ್ಪಿದ್ದಾರೆ.
 
ಭಯೋತ್ಪಾದಕರ ದಾಳಿ ಬೆನ್ನಲ್ಲೇ ಪೊಲೀಸ್, ಸಿಆರ್ ಪಿಎಫ್ ಹಾಗೂ ಸೇನಾ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು, ಭಯೋತ್ಪಾದಕರಿಗಾಗಿ ಶೋಧಕಾರ್ಯಾಚರಣೆ ನಡೆಸಿದ್ದಾರೆ. ಹಲವು ಸಂಘಟನೆಗಳು ಈ ಪ್ರದೇಶದ ಬಂದ್ ಗೆ ಕರೆ ನೀಡಿದ್ದು, ಪ್ರದೇಶ ಸಂಪೂರ್ಣವಾಗಿ ಸ್ತಬ್ಧಗೊಂಡಿದೆ. 

ರಜೌರಿ ಟೌನ್ ಸೇರಿ ಹಲವೆಡೆ ಪ್ರತಿಭಟನೆಗಳು ತೀವ್ರಗೊಂಡಿದ್ದು, ಐಇಡಿ ಸ್ಫೋಟ ಹಿರಿಯ ಅಧಿಕಾರಿಗಳನ್ನು ಗುರಿಯಾಗಿರಿಸಿಕೊಂಡು ನಡೆಸಿರುವ ದಾಳಿಯಾಗಿದೆ. ಅಧಿಕಾರಿಗಳು ಅಲ್ಲಿಗೆ ತೆರಳುವವರಿದ್ದರು ಅದನ್ನು ಗುರಿಯಾಗಿರಿಸಿಕೊಂಡೇ ದಾಳಿ ನಡೆಸಲಾಗಿದೆ ಎಂದು  ಹೇಳಿದ್ದಾರೆ.
 
ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗೌರ್ನರ್ ಮನೋಜ್ ಸಿನ್ಹಾ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ್ದು, ಈ ಘಟನೆಯ ಹಿಂದಿರುವ ಉಗ್ರರನ್ನು ಶಿಕ್ಷಿಸದೇ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಲೆಫ್ಟಿನೆಂಟ್ ಗೌರ್ನರ್ ಮೃತ ಕುಟುಂಬಗಳಿಗೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು, ಕುಟುಂಬ ಸದಸ್ಯರಿಗೆ ಸರ್ಕಾರಿ ನೌಕರಿಯನ್ನು ನೀಡುವ ಭರವಸೆ ನೀಡಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?